ಮಂಗಳೂರು: ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ - ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಏಪ್ರಿಲ್ 1ರಿಂದ 30ರ ವರೆಗೆ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ ಒಂದು ಸೇತುವೆಯಲ್ಲಿ ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್ವೆಲ್ನಿಂದ ತೊಕ್ಕೊಟ್ಟುವರೆಗೆ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ವಾಹನ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಹೆಚ್ಚು ಸಂಚಾರ ದಟ್ಟಣೆ ಇರುವ ಸಂದರ್ಭದಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರ ತಪ್ಪಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಸಾರ್ವಜನಿಕರು ಉಪಯೋಗಿಸಬಹುದಾದ ಇತರೆ ಮಾರ್ಗಗಳು

*ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು, ದ್ವಿಚಕ್ರ ವಾಹನಗಳು ಕೊಣಾಜೆ- ಹರೇಕಳ (ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.

*ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು-ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿಚಕ್ರ, ಲಘು ವಾಹನಗಳು ಅಡ್ಯಾರ್-ಹರೇಕಳ (ಬ್ರಿಡ್ಜ್) ಮುಖಾಂತರ ಸಂಚರಿಸುವುದು.

*ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು – ಉಪ್ಪಿನಂಗಡಿ – ಪುತ್ತೂರು - ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು – ಬೋಳಿಯಾರ್ -ಮೆಲ್ಕಾರ್ ಮೂಲಕ ಸಂಚರಿಸುವುದು.

*ಬಿ.ಸಿ ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.