ಉರುಳಿ ಬಿದ್ದ ಟ್ಯಾಂಕರ್: ಸಂಚಾರ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಬೆಂಗಳೂರು, ಬಳ್ಳಾರಿ, ಕೋಲಾರ, ಧಾರವಾಡ, ಕೊಪ್ಪಳ, ದಕ್ಷಿಣ ಕನ್ನಡ, ಚಿತ್ರದುರ್ಗ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ದಾಳಿ ಆರಂಭಿಸಲಾಗಿದೆ.
ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯುಟಿವ್ ಎಂಜಿನಿಯರ್ ದೇವರಾಜ್ ಕಲ್ಲೇಶ್, ಬೆಂಗಳೂರಿನ ಸಹಕಾರ ಇಲಾಖೆ ಜಂಟಿ ರಿಜಿಸ್ಟ್ರಾರ್ ಪಾಂಡರಂಗ ಗರಗ, ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನೆಗಳ ವಿಭಾಗದ ಜಂಟಿ ನಿರ್ದೇಶಕ ಕೆ.ವಿ. ಜಯರಾಜ್, ಕೋಲಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಎಸ್.ಎನ್. ವಿಜಯಕುಮಾರ್, ಕೊಪ್ಪಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಲೋಕೋಪಯೋಗಿ ಇಲಾಖೆಯ ಮಾಗಡಿ ಉಪವಿಭಾಗದ ಕಿರಿಯ ಎಂಜಿನಿಯರ್ ಚನ್ನಬಸಪ್ಪ, ಧಾರವಾಡದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್) ಶ್ರೀನಿವಾಸ್ ಅವರ ಮನೆ ಮಲೆ ದಾಳಿ ನಡೆಸಲಾಗಿದೆ.
ಈ ಅಧಿಕಾರಗಳು ಆದಾಯ ಮೀರಿ ಆಸ್ತಿ ಗಳಿಸಿರುವ ಮಾಹಿತಿ ಆಧರಿಸಿ ಶೋಧ ನಡೆಸಲಾಗುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.