ಸೋಮವಾರ, ಡಿಸೆಂಬರ್ 5, 2022
19 °C

ಕಾಟಿಪಳ್ಳ: ಪೋಷಕರ ಸಭೆಯಲ್ಲಿ ವ್ಯಕ್ತಿಯಿಂದ ಶಿಕ್ಷಕಿಗೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುರತ್ಕಲ್: ಕಾಟಿಪಳ್ಳ ಎರಡನೇ ಬ್ಲಾಕ್ ಶಂಶುದ್ದೀನ್ ವೃತ್ತದ ಬಳಿಯ ನೂರ್ ಹುದಾ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಶುಕ್ರವಾರ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಶಿಕ್ಷಕಿ ಇಲ್ಲಿನ ಪದ್ಮಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಕಾಟಿಪಳ್ಳ ನಾರಾಯಣಗುರು ಶಾಲೆಯ ಬಳಿ ನಿವಾಸಿ ಚಂದ್ರಕಲಾ ಹಲ್ಲೆಗೊಳಗಾದವರು. ಮುಹಮ್ಮದ್ ಹನೀಫ್ ಹಲ್ಲೆ ನಡೆಸಿದ ಆರೋಪಿ. ಸುರತ್ಕಲ್ ಠಾಣೆಯ ಪಿಎಸ್‌ಐ ಪುನೀತ್ ಗಾಂವ್ಕರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ವಿರುದ್ಧ ಮಹಿಳಾ ದೌರ್ಜನ್ಯ, ಹಲ್ಲೆ ಪ್ರಕರಣ ದಾಖಲಾಗಿದೆ.

ಪರಿಚಯದ ನೆಲೆಯಲ್ಲಿ ಹನೀಫ್ ಪತ್ನಿಗೆ ಚಂದ್ರಕಲಾ ಅವರು ಸಾಲ ನೀಡಿದ್ದರು. ಆ ಮಹಿಳೆ ಸಾಲವನ್ನು ಹಿಂತಿರುಗಿಸಿರಲಿಲ್ಲ. ಹಣದ ಅವಶ್ಯಕತೆ ಇದ್ದು, ಸಾಲವನ್ನು ಹಿಂತಿರುಗಿಸುವಂತೆ ಚಂದ್ರಕಲಾ ಕೇಳಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಹನೀಫ್ ಎರಡು ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದ. ಶಾಲೆಯಲ್ಲಿ ಪೋಷಕರ ಸಭೆಯ ಸಂದರ್ಭದಲ್ಲಿ ಚಂದ್ರಕಲಾ ಮತ್ತು ಹನೀಫ್ ಪತ್ನಿಯ ಮಧ್ಯೆ ಜಗಳ ನಡೆದಿದೆ. ಮಾತಿನ ಭರದಲ್ಲಿ ಶಿಕ್ಷಕಿಯು ತನ್ನ ಮಗುವಿನ ವಿಚಾರ ಪ್ರಸ್ತಾಪಿಸಿದ್ದಾರೆ ಎಂದು ಸಿಟ್ಟಾದ ಹನೀಫ್ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಶಿಕ್ಷಕಿಯ ಬಲಗೈಗೆ ಬಲವಾದ ಪೆಟ್ಟು ಬಿದ್ದಿದೆ‘ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು