ದಕ್ಷಿಣ ಕನ್ನಡ| ಶಿಕ್ಷಕರ ನೇಮಕಾತಿ ಪರೀಕ್ಷೆ: 1,686 ಮಂದಿ ಗೈರು
ಮಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ಜಿಲ್ಲೆಯ 22 ಕೇಂದ್ರದಲ್ಲಿ ಶನಿವಾರ ಬೆಳಿಗ್ಗೆ ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ ಇಂಗ್ಲಿಷ್ ಭಾಷೆ ಪರೀಕ್ಷೆಗಳು ನಡೆದವು.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಚಿಸಿದ ತ್ರಿ ಸದಸ್ಯ ಸಮಿತಿಯ ಮಾರ್ಗದರ್ಶನದಲ್ಲಿ ಪರೀಕ್ಷೆಗಳು ನಡೆದವು. ಬೆಳಿಗ್ಗೆ ನಡೆದ ಪರೀಕ್ಷೆಗೆ ಒಟ್ಟು 4,859 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದು, 3,173 ಹಾಜರಾಗಿದ್ದರು. 1,686 ಮಂದಿ ಗೈರು ಹಾಜರಾಗಿದ್ದರು. ಮಧ್ಯಾಹ್ನ ನಡೆದ ಇಂಗ್ಲಿಷ್ ಭಾಷೆ ಪರೀಕ್ಷೆಗೆ ಒಟ್ಟು 632 ಅಭ್ಯರ್ಥಿಗಳು ನೋಂದಾಯಿಸಿದ್ದು, 361ಅಭ್ಯರ್ಥಿಗಳು ಹಾಜರಾಗಿದ್ದರು. 271 ಮಂದಿ ಗೈರು ಹಾಜರಾಗಿದ್ದರು.
ನಗರ ಪೋಲಿಸ್ ಕಮಿಷನರ್ ಮೇಲುಸ್ತುವಾರಿಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಲೋಹ ಶೋಧಕ ಅಳವಡಿಸಿ ಪರೀಕ್ಷೆಯ ಪಾವಿತ್ರತೆ ಕಾಪಾಡಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.