ಸುಬ್ರಹ್ಮಣ್ಯ: ಮಳೆಯಿಂದಾಗಿ ಸಂಪರ್ಕ ಕಡಿತಗೊಂಡಿದ್ದ ಕೊಲ್ಲಮೊಗ್ರು ಗ್ರಾಮದ ಕಡಂಬಳ ಎಂಬಲ್ಲಿಗೆ ತಾತ್ಕಾಲಿಕ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ. ಸಚಿವ ಎಸ್.ಅಂಗಾರ ಅವರ ಸೂಚನೆಯಂತೆ ಕಾಮಗಾರಿ ನಡೆಸಲಾಗಿದೆ.

ಮಳೆಗೆ ಕಡಂಬಳ ಎಂಬಲ್ಲಿನ ಸೇತುವೆ ಕೊಚ್ಚಿಹೋಗಿತ್ತು. ಹಲವು ದಿನಗಳು ಕಳೆದರೂ ಸಂಪರ್ಕ ವ್ಯವಸ್ಥೆ ಕಲ್ಪಿಸದೇ ಇರುವ ಬಗ್ಗೆ ಸಚಿವರಿಗೆ ದೂರು ನೀಡಲಾಗಿತ್ತು. ಇದೀಗ ಸಚಿವರ ಸೂಚನೆಯಂತೆ ಸಂಪರ್ಕ ಕಡಿತಗೊಂಡ ತೋಡಿಗೆ ಸಿಮೆಂಟ್ ಪೈಪ್ ಅಳವಡಿಸಿ, ಸಂಪರ್ಕ ರಸ್ತೆ ನಿರ್ಮಿಸಲಾಗಿದೆ. ಗುತ್ತಿಗೆದಾರ ರಾಧಾಕೃಷ್ಣ ಕಟ್ಟೆಮನೆ ಅವರು ಕೆಲಸ ನಿರ್ವಹಿಸಿದ್ದಾರೆ.

ಇಲ್ಲಿಗೆ ಕೆಲ ದಿನಗಳ ಹಿಂದೆ ಸ್ಥಳಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದರು. ಸಂಪರ್ಕಕ್ಕೆ ತಾತ್ಕಾಲಿಕವಾಗಿ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.