ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಭಜಕ ಹಾರಿ ಬಂದು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು

Last Updated 9 ಏಪ್ರಿಲ್ 2022, 12:40 IST
ಅಕ್ಷರ ಗಾತ್ರ

ಮಂಗಳೂರು: ನಗರದ ಬಳ್ಳಾಲಬಾಗ್‌ನಲ್ಲಿ ರಸ್ತೆ ವಿಭಜಕವನ್ನು ಹಾರಿ ಇನ್ನೊಂದು ಬದಿಗೆ ಬಂದ ಬಿಎಂಡಬ್ಲ್ಯು ಕಾರು, ಎದುರಿನಿಂದ ಬರುತ್ತಿದ್ದ ಕಾರುಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಬಿಎಂಡಬ್ಲ್ಯು ಕಾರಿನ ಚಾಲಕ ಮತ್ತಿನಲ್ಲಿದ್ದು, ಅತಿ ವೇಗವಾಗಿ ಚಲಾಯಿಸಿಕೊಂಡು ಬರುತ್ತಿದ್ದ. ಕಾರು ನಿಯಂತ್ರಣಕ್ಕೆ ಬರದೇ, ವಿಭಜಕದ ಮೇಲೇರಿ, ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಶನಿವಾರ ಮಧ್ಯಾಹ್ನ ಈ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿತ್ತು. ಅಪಘಾತದಲ್ಲಿ ಹಲವು ವಾಹನಗಳಿಗೆ ಹಾನಿಯಾಗಿದ್ದು, ಸ್ಥಳದಲ್ಲಿದ್ದ ಜನರು ಬಿಎಂಡಬ್ಲ್ಯು ಕಾರಿನ ಚಾಲಕನನ್ನು ಥಳಿಸಿದರು.

ಸಂಚಾರ ಪೊಲೀಸರು ಬಿಎಂಡಬ್ಲ್ಯು ಕಾರಿನ ಚಾಲಕನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT