ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಪಂಪ್‌ವೆಲ್‌ ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಜಾರಿದ ಕಾರು

Last Updated 15 ಜುಲೈ 2021, 13:33 IST
ಅಕ್ಷರ ಗಾತ್ರ

ಮಂಗಳೂರು: ಗುರುವಾರ ಸಂಜೆ ನಗರದ ಪಂಪ್‌ವೆಲ್ ಮೇಲ್ಸೇತುವೆಯಿಂದ ಕಾರೊಂದು ಸರ್ವಿಸ್ ರಸ್ತೆಗೆ ಜಾರಿದೆ.

ನಗರದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಈ ಕಾರು ಸೇರಿದ್ದು, ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ಬರುತ್ತಿತ್ತು. ಎದುರಿನಿಂದ ವೇಗವಾಗಿ ವಾಹನವೊಂದು ಬಂದಿದ್ದು, ವಾಹನದ ವೇಗಕ್ಕೆ ರಸ್ತೆಯಲ್ಲಿ ನಿಂತಿದ್ದ ಮಳೆನೀರು ವೈದ್ಯರ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಬಿದ್ದಿದೆ. ಈ ವೇಳೆ ದಾರಿ ಕಾಣದೇ ನಿಯಂತ್ರಣ ತಪ್ಪಿದ ಕಾರು ಸರ್ವಿಸ್ ರಸ್ತೆಗೆ ಜಾರಿದೆ.

ಕೆಳ ರಸ್ತೆಗೆ ಜಾರಿದ ಕಾರನ್ನು ಸ್ಥಳೀಯರ ಸಹಕಾರದೊಂದಿಗೆ ಪೊಲೀಸರು ಸಮತಟ್ಟಾದ ರಸ್ತೆಗೆ ತಳ್ಳಿ ನಿಲ್ಲಿಸಿದರು. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT