ಮೂಡುಬಿದಿರೆ: ‘ಈಗಿನ ರಾಜಕೀಯ ವ್ಯವಸ್ಥೆ ಕೆಟ್ಟು ಹೋಗಿದೆ. ಅವಕಾಶವಾದಿ ರಾಜಕಾರಣಿಗಳು ಹಾಗೂ ಕುಟುಂಬ ರಾಜಕಾರಣವು ರಾಜಕೀಯ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ’ ಎಂದು ಮಾಜಿ ಸಚಿವ, ಕಾಂಗ್ರೆಸ್ನ ಅಭಯಚಂದ್ರ ಜೈನ್ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದಾಗ ಕಾಂಗ್ರೆಸ್ ಶಾಸಕರು ಹಾಗೂ ಮಂತ್ರಿಗಳು ಮುಖ್ಯಮಂತ್ರಿ ಪರ ನಿಂತು ಒಗ್ಗಟ್ಟು ಪ್ರದರ್ಶಿಸಿದರು. ಆದರೆ, ಅವರಲ್ಲಿ ಕೆಲವರು ಈಗ ಮುಖ್ಯಮಂತ್ರಿ ಹುದ್ದೆಗೆ ಆಕಾಂಕ್ಷಿ ಎನ್ನುವ ಹೇಳಿಕೆ ನೀಡಿರುವುದನ್ನು ನೋಡುವಾಗ ಆಶ್ಚರ್ಯವಾಗುತ್ತಿದೆ’ ಎಂದರು.

‘ಇಲ್ಲಿ ಯಾರನ್ನೂ ನಂಬುವ ಸ್ಥಿತಿ ಇಲ್ಲದಂತಾಗಿದೆ. ಮೊದಲ ಬಾರಿ ಶಾಸಕ ಆದವರಿಗೆ ಮಂತ್ರಿಯಾಗುವ ಆಸೆ, ಮಂತ್ರಿಯಾದವರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ. ಭಾರತದ ರಾಜಕೀಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ಭ್ರಷ್ಟ ರಾಜಕಾರಣಿಗಳನ್ನು ಜನರೇ ದೂರ ಇಡಬೇಕು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.