ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಿ ಕಾಶ್ಮೀರ್ ಫೈಲ್ಸ್’ ಫೇಕ್ ಲಿಂಕ್: ವೈರಸ್ ದಾಳಿ ಸಾಧ್ಯತೆ ಎಂದ ಸೈಬರ್ ತಜ್ಞ

Last Updated 18 ಮಾರ್ಚ್ 2022, 14:20 IST
ಅಕ್ಷರ ಗಾತ್ರ

ಮಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವು ಎಲ್ಲೆಡೆ ಸದ್ದು ಮಾಡುತ್ತಿದ್ದರೆ, ಸೈಬರ್ ಕಳ್ಳರು ಅದನ್ನೇ ಬಂಡವಾಳ ಮಾಡಿಕೊಂಡು ಸೈಬರ್ ದಾಳಿ ಮಾಡುತ್ತಿದ್ದಾರೆ. ಚಿತ್ರದ ಫ್ರೀ ಡೌನ್‌ಲೋಡ್ ಲಿಂಕ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದನ್ನು ಕ್ಲಿಕ್ ಮಾಡಿದರೆ, ವೈರಸ್ ದಾಳಿಗೆ ಒಳಗಾಗುವ ಸಾಧ್ಯತೆ ಇರುತ್ತದೆ ಎಂದು ಸೈಬರ್ ತಜ್ಞ ಡಾ. ಅನಂತ್‌ ಪ್ರಭು ಎಚ್ಚರಿಸಿದ್ದಾರೆ.

ಡೌನ್‌ಲೋಡ್ ಲಿಂಕ್ ಹೆಸರಲ್ಲಿ ಸೈಬರ್ ಹ್ಯಾಕರ್ಸ್ ವೈರಸ್ ಕಳುಹಿಸುತ್ತಿದ್ದು, ಅದರ ಮೂಲಕ ಆಂಡ್ರಾಯ್ಡ್‌ ಫೋನ್ ಅಥವಾ ಲ್ಯಾಪ್‌ಟಾಪ್‌ನಲ್ಲಿರುವ ಮಾಹಿತಿಗಳನ್ನು ಕದಿಯಬಹುದು. ವೈರಸ್ ಮೂಲಕ ಸ್ಮಾರ್ಟ್ ಫೋನ್‌ ಅನ್ನು ಹ್ಯಾಕ್ ಮಾಡುವ ಸೈಬರ್ ಕಳ್ಳರು, ಅರಿವಿಲ್ಲದಂತೆ ಮೊಬೈಲ್ ಜೊತೆಗೆ ಲಿಂಕ್ ಆಗಿರುವ ಬ್ಯಾಂಕ್ ಮಾಹಿತಿ ಪಡೆಯುತ್ತಾರೆ. ಮೊಬೈಲ್‌ ಒಳಗಿರುವ ಇತರ ಮಾಹಿತಿಗಳನ್ನು ದುರ್ಬಳಕೆ ಮಾಡಿಕೊಳ್ಳಬಹುದು. ಸುಲಭದಲ್ಲಿ ಸಿನಿಮಾ ನೋಡಬಹುದು ಎಂದು ಲಿಂಕ್ ಒತ್ತಿ ಅಪಾಯಕ್ಕೆ ಸಿಲುಕಬಾರದು ಎಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT