ಸುರತ್ಕಲ್: ಮಂಗಳೂರು ಕೋಟಿ ಚೆನ್ನಯ ಸೇವಾ ಬ್ರಿಗೇಡ್ ಇದರ ಆಶ್ರಯದಲ್ಲಿ ಕಿರಣ್ ಕುಮಾರ್ ಕೋಡಿಕಲ್ ಸಾರಥ್ಯದಲ್ಲಿ ಕೋಟಿ ಚೆನ್ನಯ ಟ್ರೋಫಿ– 2023 ಹಗ್ಗ ಜಗ್ಗಾಟ ಕ್ರೀಡಾಕೂಟ ಫೆ.19ರಂದು ನಡೆಯಲಿದ್ದು, ಇದರ ಟ್ರೋಫಿ ಹಾಗೂ ಜೆರ್ಸಿ ಅನಾವರಣ ಕಾರ್ಯಕ್ರಮ ಶುಕ್ರವಾರ ಸಂಜೆ ಬಂಗ್ರಕೂಳೂರಿನಲ್ಲಿ ಜರುಗಿತು.

ಈ ವೇಳೆ ಮಾತನಾಡಿದ ಆರ್ಎಸ್ಎಸ್ ಮುಖಂಡ ಸುನಿಲ್ ಆಚಾರ್, ನಶಿಸುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಪಾಲಿಕೆ ಸದಸ್ಯ ಕಿರಣ್ ಕುಮಾರ್ ಅವರು ಹಗ್ಗ ಜಗ್ಗಾಟದಂತಹ ಕ್ರೀಡೆಯನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.

ಕಿರಣ್ ಕುಮಾರ್ ಕೋಡಿಕಲ್ ಮಾತನಾಡಿ, ಈಗಾಗಲೇ 40 ತಂಡಗಳು ನೋಂದಣಿಯನ್ನು ಮಾಡಿಕೊಂಡಿವೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಉತ್ತರ ಕನ್ನಡ ನಾಲ್ಕು ಜಿಲ್ಲೆಗಳ ಕ್ರೀಡಾಳುಗಳಿಗೆ ಆಹ್ವಾನ ನೀಡಿದ್ದೇವೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದು, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಎಂ ಭಾಗವಹಿಸುವರು ಎಂದರು.

ರಮೇಶ್ ಶೆಟ್ಟಿ, ಸದಾನಂದ ಅಂಚನ್, ನಯನಾ ಕೋಟ್ಯಾನ್, ರೋಹನ್, ಮನೋಹರ್ ಕೋಡಿಕಲ್, ಉಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.