ಶನಿವಾರ, ನವೆಂಬರ್ 28, 2020
24 °C

ದೇಶದಲ್ಲಿ ಪರಿವರ್ತನೆಯ ಗಾಳಿ: ನಳಿನ್ ಕುಮಾರ್ ಕಟೀಲ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದೇಶದಲ್ಲಿ ಪರಿವರ್ತನೆಯ ಗಾಳಿಯನ್ನು ಕಾಣಬಹುದು. ಎಲ್ಲೆಡೆ ನಿರೀಕ್ಷೆ ಮೀರಿ ಬಿಜೆಪಿಗೆ ಜಯ ಲಭಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. 
ನಗರದಲ್ಲಿ ಮಂಗಳವಾರ ವಿಜಯೋತ್ಸವ ಆಚರಿಸಿ ಅವರು ಮಾತನಾಡಿದರು.

ಎಲ್ಲೆಡೆ ಬಿಜೆಪಿ ಸಾಮೂಹಿಕ ನಾಯಕತ್ವ ಕ್ಕೆ ಜಯ ಸಿಗುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಹಾಗೂ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಮಂತ್ರಕ್ಕೆ ಜನ ಆಶೀರ್ವಾದ ಮಾಡಿದ್ದಾರೆ.

ವಿಪಕ್ಷಗಳು ಟೀಕೆ ಮಾಡಿದರೂ, ಜನರ ಒಲವು ಬಿಜೆಪಿಯತ್ತ ಇದೆ ಎಂದರು.

ಶಿರಾದಲ್ಲಿ ಪಂಚಪಾಂಡವರು ಹಾಗೂ ರಾಜರಾಜೇಶ್ವರಿ ನಗರದಲ್ಲಿ ಅಶೋಕ್ ಹಾಗೂ ಲಿಂಬಾವಳಿ ಅವರು ಜೋಡೆತ್ತು ರೀತಿಯಲ್ಲಿ ದುಡಿದು ಪಕ್ಷವನ್ನು ಗೆಲ್ಲಿಸಿದ್ದಾರೆ. ಜನ ಕಾಂಗ್ರೆಸ್ ತಿರಸ್ಕರಿಸಿದ್ದಾರೆ. ಬಂಡೆ, ಹುಲಿಯಾ ಎಲ್ಲವನ್ನೂ ಜನರು ತಿರಸ್ಕರಿಸಿದ್ದು, ಅವರು ಎಲ್ಲೆಲ್ಲಿ ಇದ್ದಾರೆ ಎಂದು ಹುಡುಕಬಹುದು ಎಂದು ಟೀಕಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು