ಉಳ್ಳಾಲ: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಚಾರ ಅವ್ಯವಸ್ಥೆಯಿಂದ ಉಂಟಾದ ಗೊಂದಲಗಳಿಗೆ ಪರಿಹಾರ ಒದಗಿಸುವಂತೆ ಶಾಸಕ ಯು.ಟಿ.ಖಾದರ್ ನೇತೃತ್ವದ ನಿಯೋಗ ತೊಕ್ಕೊಟ್ಟು ಮೇಲ್ಸೇ ತುವೆ, ಉಳ್ಳಾಲಬೈಲು, ತೊಕ್ಕೊಟ್ಟು ಜಂಕ್ಷನ್ಗೆ ಸಂಚಾರ ಪೊಲೀಸ್, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿಯೋಗದೊಂದಿಗೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಅನುಸರಿ ಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎರಡೂ ಬದಿಯ ಸರ್ವಿಸ್ ರಸ್ತೆಗಳಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಬೇಕು. ಉಳ್ಳಾಲಕ್ಕೆ ತೆರಳುವ ಬಸ್, ಇತರ ವಾಹನಗಳು ಕಾಪಿಕಾಡು ವಿಭಜಕ ದಾಟಿಯೇ ಉಳ್ಳಾಲದ ರಸ್ತೆಯಾಗಿ ತೆರಳಬೇಕು. ತೊಕ್ಕೊಟ್ಟು ಒಳಪೇಟೆಗೆ ಸಂಚರಿಸುವ ವಾಹನಗಳು ಉಳ್ಳಾಲಬೈಲ್ ವಿಭಜಕ ದಾಟಿ ಬಳಿಕ ಮೇಲ್ಸೇತುವೆ ರಸ್ತೆಯಿಂದ ಇಳಿಯುವಂತೆ ಮಾಡಿದರೆ ಸಂಚಾರ ಸಮಸ್ಯೆ ನಿವಾರಣೆ ಆಗಬಹುದು. ತೊಕ್ಕೊಟ್ಟುವಿನಿಂದ ಉಳ್ಳಾಲವರೆಗಿನ ರಸ್ತೆಬದಿಯ ಅಂಗಡಿ ತೆರವುಗೊಳಿಸಬೇಕು. ಸ್ವಚ್ಛತೆ ಕಾಪಾಡುವಂತೆ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ತೊಕ್ಕೊಟ್ಟು ಮೇಲ್ಸೇತುವೆ -ಉಳ್ಳಾಲಬೈಲ್ ರಸ್ತೆ ಅಭಿವೃದ್ಧಿಗೆ ₹ 30 ಲಕ್ಷ ಅನುದಾನದ ಪ್ರಸ್ತಾಪ ಇರಿಸಲಾಗಿದೆ. ಶೀಘ್ರ ಮಂಜೂರುಗೊಂಡು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ತೊಕ್ಕೊಟ್ಟು ಮೇಲ್ಸೇತುವೆ ಜಂಕ್ಷನ್ನಲ್ಲಿ ವಾಹನ ದಟ್ಟಣೆ ಹೆಚ್ಚಾದಾಗ ಒಳಪೇಟೆಯಾಗಿ ತೆರಳಲು ಉಳ್ಳಾಲಬೈಲ್ ಕೆಳ ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ಕಳುಹಿಸಬೇಕು. ಶೀಘ್ರವೇ ಉಳ್ಳಾಲಬೈಲ್ ರೈಲ್ವೇ ಹಳಿ ಸಮೀಪದ ಕಿರಿದಾದ ಸೇತುವೆಯನ್ನು ವಿಸ್ತರಣೆಗೊಳಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಚರ್ಚಿಸಬೇಕೇ ಹೊರತು ಸಮಸ್ಯೆಗಳನ್ನೇ ಚರ್ಚಿಸುವುದಲ್ಲ. ಸಮಸ್ಯೆ ಬಗೆಹರಿ ಸುವುದೇ ನಮಗೆ ಪ್ರೇರಣೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-317664136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.