ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಗಡಿ ಮುಚ್ಚುವ ಚಿಂತನೆ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌
Last Updated 20 ಮಾರ್ಚ್ 2020, 11:09 IST
ಅಕ್ಷರ ಗಾತ್ರ

ಮಂಗಳೂರು: ಕೊರೊನಾ ವೈರಸ್‌ ಸೋಂಕು ಹರಡದಂತೆ ನಿಯಂತ್ರಿಸಲು ಅನಿವಾರ್ಯವಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳನ್ನು ಮುಚ್ಚುವ ಕುರಿತು ಚಿಂತನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ತಿಳಿಸಿದರು.

ಮಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾ ಸಂವಾದದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ‘ಸದ್ಯ ಜಿಲ್ಲೆಯ ಗಡಿಗಳಲ್ಲಿ ನಿಗಾ ಇರಿಸಲಾಗಿದೆ. ವಿದೇಶಗಳಿಂದ ಬಂದವರನ್ನಷ್ಟೇ ತಪಾಸಣೆ ನಡೆಸಲಾಗುತ್ತಿದೆ. ಈವರೆಗೆ ಕೊರೊನಾ ವೈರಸ್‌ ಸೋಂಕು ತಗುಲಿರುವ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ. ಅಂತಹ ಪ್ರಕರಣಗಳು ವರದಿಯಾದರೆ, ಸೋಂಕು ಹಬ್ಬಲಾರಂಭಿಸಿದರೆ ಜಿಲ್ಲೆಯ ಗಡಿಗಳನ್ನು ಮುಚ್ಚುವ ಕುರಿತು ನಿರ್ಧಾರಕ್ಕೆ ಬರಲಾಗುವುದು’ ಎಂದರು.

ಕೊರೊನಾ ವೈರಸ್‌ ಪತ್ತೆ ಪರೀಕ್ಷಾ ಪ್ರಯೋಗಾಲಯವನ್ನು ಮಂಗಳೂರಿನಲ್ಲಿ ಆರಂಭಿಸುವ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಜೊತೆ ಚರ್ಚಿಸಲಾಗುತ್ತಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ತಜ್ಞರ ನೆರವು ಪಡೆದು ಪ್ರಯೋಗಾಲಯ ಆರಂಭಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT