ಕುರ್ನಾಡು ಮಸೀದಿ ಬಳಿ ಶಾಂತಿ ಕದಡಲು ಸೃಷ್ಟಿಸಲು ಯತ್ನ: ಮೂವರ ಬಂಧನ
ಮಂಗಳೂರು: ಕುರ್ನಾಡಿನ ಮಸೀದಿಯ ಬಳಿ ಶಾಂತಿ ಕದಡಲು ಯತ್ನಿಸಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾನುವಾರ ರಾತ್ರಿಮೂವರು ಯುವಕರು ಮಸೀದಿಯ ಬಳಿ ಬಂದು ಬೊಬ್ಬೆ ಹಾಕಿದ್ದಾರೆ. ಅಲ್ಲದೇ ಮಸೀದಿಯೊಳಗೆ ನುಗ್ಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಯುವಕರನ್ನು ಬೆನ್ನಟ್ಟಿದ ಸಾರ್ವಜನಿಕರು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೂವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಇನ್ನಷ್ಟೇ ಎಫ್ಐಆರ್ ದಾಖಲಿಸಬೇಕಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.