ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದಲ್ಲಿ ಮಂಗಳವಾರ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಡಿಗೆ ಬಿದ್ದು ಮೂವರು ಯುವಕರು ಮೃತಪಟ್ಟಿದ್ದಾರೆ.

ಪಟ್ರಮೆ ಗ್ರಾಮದ ರಾಮಣ್ಣ ಕುಂಬಾರ ಎಂಬವರ ಪುತ್ರ ಪ್ರಶಾಂತ್ (21), ಸೇಸಪ್ಪ ಪೂಜಾರಿ ಅವರ ಮಗ ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ನಿವಾಸಿ ಗಣೇಶ್ (38) ಮೃತರು.

ಪಟ್ರಮೆ ಗ್ರಾಮದ ಅನಾರು ಸಮೀಪದ ಕಾಯಿಲ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ದೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ, ಈ ದುರ್ಘಟನೆ ನಡೆದಿದೆ. ಈ ಸಂಬಂಧ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ, ಧರ್ಮಸ್ಥಳ ಸಬ್ ಇನ್‌ಸ್ಪೆಕ್ಟರ್ ಪವನ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.