ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ರಕ್ಷಿಸಿ, ಎರಡು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಹಿತಿ ಆಧರಿಸಿ ಎಸ್ಐ ಪ್ರತಿಭಾ ಮತ್ತು ಪೊಲೀಸರ ತಂಡ ಇಲ್ಲಿನ ತೋಡಾರು ಬಳಿ ಭಾನುವಾರ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಎರಡು ಪಿಕ್ಅಪ್ ವಾಹನಗಳನ್ನು ನಿಲ್ಲಿಸಲು ಸೂಚಿಸಿದ್ದು, ಚಾಲಕ ವಾಹನವನ್ನು ಮುಂದೆ ಚಲಾಯಿಸಿದ್ದರು. ಪೊಲೀಸರು ವಾಹನಗಳನ್ನು ಬೆನ್ನಟ್ಟಿ ಅಡ್ಡಗಟ್ಟಿದರು. ವಾಹನದಲ್ಲಿದ್ದ ಹರ್ಷದ್, ಸಫರ್ ಹಾಗೂ ಅಬೂಬಕರ್ ಸೇರಿ ಆರೋಪಿಗಳು ಸ್ಥಳದಿಂದ ಪರಾರಿಯಾದರು.

ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಪಿಕಪ್ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರಿನ ಚಾಲಕ ಸಫರ್ ಮತ್ತು ಹಂಡೇಲು ನಿವಾಸಿ ಅಬೂಬಕರ್ ಪರಾರಿಯಾದರು. ವಾಹನದಲ್ಲಿ ಎರಡು ಹಸು, ಎರಡು ಹೋರಿ, ನಾಲ್ಕು ಗಂಡು ಕರುಗಳು ಪತ್ತೆಯಾದವು. ಆರೋಪಿಗಳು ಕಳ್ಳತನದ ಜಾನುವಾರುಗಳನ್ನು ಅಬೂಬಕರ್ ಎಂಬುವವರ ಮನೆಗೆ ಸಾಗಿಸಿ, ಅಲ್ಲಿ ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-29-129612508

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.