ಬಂಟ್ವಾಳ: ಇಲ್ಲಿನ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್ ಗೇಟ್ ಸಂಪೂರ್ಣ ಮುಚ್ಚಲು ಆಗ್ರಹಿಸಿ ಮಾರ್ಚ್ 3ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ಸಾಮೂಹಿಕ ಧರಣಿ ನಡೆಸುವುದಾಗಿ ಟೋಲ್ ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಎಚ್ಚರಿಸಿದ್ದಾರೆ.

ಬಿ.ಸಿ.ರೋಡಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹೋರಾಟ ಬಂಟ್ವಾಳ ತಾಲ್ಲೂಕಿಗೆ ಸೀಮಿತವಾಗದೆ ಸುಂಕ ಸಂಕಷ್ಟ ಅನುಭವಿಸಿದ ಜಿಲ್ಲೆಯ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ನಿರಂತರವಾಗಿ ನಡೆಯಲಿದೆ’ ಎಂದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಎಚ್ಚೆತ್ತು ಈ ಟೋಲ್ ಸಂಗ್ರಹಕ್ಕೆ ಸಂಬಂಧಪಟ್ಟಂತೆ ನಿಯಮಾವಳಿ ಉಲ್ಲಂಘನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರವಾಗಿ ಸುಂಕ ವಸೂಲಾತಿ ಶಾಶ್ವತ ಮುಚ್ಚುವತನಕ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು.

ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ, ‘ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಕೂಡಲೇ ಸಭೆ ನಡೆಸಿ ಗುತ್ತಿಗೆದಾರರ ಹೂಡಿಕೆ ಮತ್ತು ಸಂಗ್ರಹವಾದ ಮೊತ್ತದ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು’ ಎಂದರು.

ಸುರತ್ಕಲ್ ಹೋರಾಟದ ಮಾದರಿಯಲ್ಲಿ ವಿವಿಧ ಸಂಘಟನೆಗಳ ಬೆಂಬಲ ವ್ಯಕ್ತವಾಗುತ್ತಿದ್ದು, ಹೋರಾಟವು ಗಂಭೀರ ಸ್ವರೂಪಕ್ಕೆ ತಲುಪುವ ಮೊದಲು ಇಲಾಖೆ ಎಚ್ಚೆತ್ತುಕೊಳ್ಳಬೇಕು. ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲಭೂತ ಸೌಕರ್ಯಗಳ ಕೊರತೆ ನಡುವೆ ಎರಡು ಟೋಲ್ ಗೇಟ್ಗಳ ನಡುವಿನ ಕನಿಷ್ಠ ಅಂತರ, ಸರ್ವಿಸ್ ರಸ್ತೆ, ಮೇಲ್ಸೇತುವೆ, ತಡೆಯಿಲ್ಲದ ಸಂಚಾರ ಮತ್ತಿತರ ನಿಯಮಾವಳಿ ಉಲ್ಲಂಘನೆಯಾಗುತ್ತಿದ್ದರೂ ಜಿಲ್ಲೆಯ ಶಾಸಕರು ಮತ್ತು ಸಂಸದರು ಕೆಡಿಪಿ ಸಭೆಯಲ್ಲಿ ಮೌನವಾಗಿದ್ದಾರೆ ಎಂದು ಅವರು ಆರೋಪಿಸಿದರು. ಫಾಸ್ಟ್ಟ್ಯಾಗ್ ನೆಪದಲ್ಲಿ ಸ್ಥಳೀಯ ವಾಹನಗಳಿಗೂ ಸುಂಕ ವಸೂಲಿ ಮಾಡುವ ಮೂಲಕ ಹಗಲು ದರೋಡೆ ನಡೆಯುತ್ತಿದೆ ಎಂದು ಅವರು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಬಿ.ಶೇಖರ್, ಅಧ್ಯಕ್ಷ ಮೋಹನ್ ಶೆಟ್ಟಿ ಪಂಜಿಕಲ್ಲು, ಪಿಯೂಸ್ ಎಲ್.ರಾಡ್ರಿಗಸ್, ಬೇಬಿ ಕುಂದರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.