ಬುಧವಾರ, ಜನವರಿ 20, 2021
21 °C

ಟೋಲ್‌ಗೇಟ್‌ ಸಿಬ್ಬಂದಿ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ಟೋಲ್‌ ಶುಲ್ಕ ಕೇಳಿದ ಸಿಬ್ಬಂದಿಯ ಮೇಲೆ 8 ಜನರ ತಂಡವೊಂದು ಭಾನುವಾರ ರಾತ್ರಿ ಹಲ್ಲೆ ನಡೆಸಿದೆ.

ಕೆಎ 47 ಹಾಗೂ ಕೆಎ 19ನೋಂದಣಿ ಹೊಂದಿರುವ ಭಟ್ಕಳದಎರಡು ಕಾರುಗಳಲ್ಲಿದ್ದ 8 ಜನರು ಟೋಲ್‌ಗೇಟ್‌ನ ಬೂತ್‌ಗೆ ನುಗ್ಗಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಪೀಠೋಕರಣ ಮತ್ತು ಯಂತ್ರೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಟೋಲ್‌ಗೇಟ್‌ ಸಿಬ್ಬಂದಿಗೆ ಮೂಳೆ ಮುರಿದಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೋಲ್‌ಗೇಟ್‌ನ ಸಿಬ್ಬಂದಿ 112 ತುರ್ತು ಸಹಾಯವಾಣಿಗೆ ಕರೆ ಮಾಡಿದ್ದು, ಪೊಲೀಸರು ಬರುವಷ್ಟರಲ್ಲಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.