7

ನಾಳೆ ಶಾಲಾ, ಕಾಲೇಜುಗಳಿಗೆ ರಜೆ

Published:
Updated:

ಮಡಿಕೇರಿ: ಮಳೆಯ ತೀವ್ರತೆ ಹೆಚ್ಚಾಗಿದ್ದು‌ ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ‌ ರಜೆ ಘೋಷಿಸಲು ಜಿಲ್ಲಾಧಿಕಾರಿ‌ ಪಿ.ಐ. ಶ್ರೀವಿದ್ಯಾ ಆದೇಶಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಪುನರ್ವಸು ಮಳೆ ಅಬ್ಬರಿಸಲು ಆರಂಭಿಸಿದೆ. ಶುಕ್ರವಾರ ರಾತ್ರಿಯಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಹಳ್ಳಕೊಳ್ಳಗಳು ಭರ್ತಿಯಾಗಿವೆ. ನದಿಗಳ ಮಟ್ಟ ಏರಿಕೆಯಾಗಿದ್ದು, ಅಪಾರ ಪ್ರಮಾಣದ ನೀರು ಹರಿಯುತ್ತಿದೆ.

ಹೊಸ ನಕ್ಷತ್ರದ ಮಳೆ ಪದಾರ್ಪಣೆ ಮಾಡಿ, ಎರಡೇ ದಿನಕ್ಕೆ ವರುಣ ಆರ್ಭಟಿಸಲು ಆರಂಭಿಸಿದ್ದಾನೆ. ಭಾನುವಾರವೂ ಭಾರಿ ಮಳೆ ಸುರಿದಿದ್ದು. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲೆ ಹಾಗೂ ಕಾಲೇಜುಗಳಿಗೆ ಜಿಲ್ಲಾಡಳಿತ ಸೋಮವಾ ರಜೆ ಘೋಷಿಸಿದೆ.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !