ಆಕಾಶ್ ಅವರು ಬೀರೂರಿನ ಈಕ್ವಿಟಾಸ್ ಬ್ಯಾಂಕ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಭಾನುವಾರ ಸಂಜೆ ಹೆಳವರ ಹಟ್ಟಿ ಕಡೆಗೆ ತೆರಳುತ್ತಿದ್ದಾಗ ಅವಘಡ ನಡೆದಿದೆ. ತಲೆ ಮತ್ತು ಕೈಗೆ ಬಲವಾದ ಪೆಟ್ಟು ಬಿದ್ದಿದ್ದ ಅವರನ್ನು ಬೀರೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟರು. ಅಪಘಾತ ಎಸಗಿದ ಟ್ರಾಕ್ಟರ್ ಮತ್ತು ಚಾಲಕನ ಗುರುತು ಪತ್ತೆಯಾಗಿಲ್ಲ.