ಉಜಿರೆ: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಬೆಳ್ತಂಗಡಿಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೂನ್ 27ರಂದು ಬೆಳಿಗ್ಗೆ 10.30ರಿಂದ ಬೆಳೆಸಮೀಕ್ಷೆ ತಂತ್ರಾಂಶ, ಅಡಿಕೆ ಹಾಗೂ ತೆಂಗು ಬೆಳೆಗಳ ಸಮಗ್ರ ರೋಗ ನಿರ್ವಹಣೆ ಕುರಿತು ತರಬೇತಿ ಆಯೋಜಿಸಲಾಗಿದೆ.

ಸಹಾಯಕ ತೋಟಗಾರಿಕಾ ಅಧಿಕಾರಿ ಮಹಾವೀರ, ಪ್ರಭಾಕರ ಮಯ್ಯ ಮತ್ತು ಪ್ರಗತಿಪರ ಕೃಷಿಕರು ಸಂಪನ್ಮೂಲ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಉಪನ್ಯಾಸ ನಾಳೆ

ಉಜಿರೆ: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಬೆಳ್ತಂಗಡಿಯ ವಾಣಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಜೂನ್ 26ರಂದು ಮಧ್ಯಾಹ್ನ 2 ಗಂಟೆಗೆ ರಾಷ್ಟ್ರಕವಿ ಕುವೆಂಪು ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.

ಉಜಿರೆ ಎಸ್ಡಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಬೋಜಮ್ಮ ಕೆ.ಎನ್. ಉಪನ್ಯಾಸ ನಿಡಲಿದ್ದು, ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜೂನ್ 29ರಂದು ಉಜಿರೆ ರೈನಥಾನ್

ಉಜಿರೆ: ಇಲ್ಲಿನ ವ್ಯಾಯಾಮ್ ಫಿಟ್ನೆಸ್ ಸಂಸ್ಥೆಯ ನೇತೃತ್ವದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್, ಉಜಿರೆ ಎಸ್ಡಿಎಂ ಶಿಕ್ಷಣ ಸಂಸ್ಥೆ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜೂನ್ 29ರಂದು ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಉಜಿರೆ ರೈನಥಾನ್ (ಮಳೆಯಲ್ಲಿ ಓಟ) ಆಯೋಜಿಸಲಾಗಿದೆ ಎಂದು ಸಮಿತಿ ಸಂಚಾಲಕ ಪ್ರವೀಣ್ ಗೋರೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರಥಮ ಬಹುಮಾನವಾಗಿ ₹ 10ಸಾವಿರ, ದ್ವಿತೀಯ ₹7 ಸಾವಿರ, ತೃತೀಯ ₹ 5ಸಾವಿರ, ಏಳು ಸ್ಪರ್ಧಿಗಳಿಗೆ ತಲಾ ₹ 1 ಸಾವಿರ ನಗದು ಬಹುಮಾನ ನೀಡಲಾಗುವುದು. ಪುರುಷರು, ಮಹಿಳೆಯರುಗೆ ಪ್ರತ್ಯೇಕ ಬಹುಮಾನ ಇದೆ ಎಂದರು.

ಬೆಳ್ತಂಗಡಿ ರೋಟರಿಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಮಾತನಾಡಿ, ಆಸಕ್ತರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬಹುದು. ಅವರಿಗೆ ಪ್ರಮಾಣಪತ್ರ ಮತ್ತು ಫಲಕ ನೀಡಲಾಗುವುದು ಎಂದು ತಿಳಿಸಿದರು.

ಜೂನ್ 29ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ರೈನಥಾನ್ ಉದ್ಘಾಟಿಸುವರು. ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯ ಡಿವೈಎಸ್ಪಿ ಮಂಜುನಾಥ ಆರ್.ಜಿ. ಭಾಗವಹಿಸುವರು. ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಅಧ್ಯಕ್ಷತೆ ವಹಿಸುವರು. ಬೆಳಿಗ್ಗೆ 11ಕ್ಕೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಮುಖರಾದ ಬಿ.ಕೆ.ಧನಂಜಯರಾವ್, ರಾಜೇಶ್ ಪೈ, ಮೋಹನ ಕುಮಾರ್, ಆದರ್ಶ ಕಾರಂತ, ಶಿಶಿರ್ ರಘುಚಂದ್ರ, ಅನೂಪ್ ಜೈನ್, ಪ್ರೊ.ಪ್ರಕಾಶ ಪ್ರಭು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.