ಕರ್ತವ್ಯ ಪ್ರಜ್ಞೆಯಿಂದ ಮಾನಸಿಕ ತೃಪ್ತಿ: ಹೆಗ್ಗಡೆ

ಉಜಿರೆ: ‘ಪ್ರತಿಯೊಬ್ಬರು ತಮ್ಮ ಕೆಲಸವನ್ನು ಕರ್ತವ್ಯ ಪ್ರಜ್ಞೆಯಿಂದ ಮಾಡಿದಾಗ ಮಾನಸಿಕ ಶಾಂತಿ, ತೃಪ್ತಿ ಹಾಗೂ ಸಂತೋಷ ಸಿಗುತ್ತದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ವಿಪತ್ತು ಸೇವಾ ಸಮಿತಿಯ ಸಂಯೋಜಕರಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಹೇಮಾವತಿ ಹೆಗ್ಗಡೆ ಮಾತನಾಡಿ ಶೌರ್ಯ ತಂಡದ ಸದಸ್ಯರು ವಿಪತ್ತಿನ ಸಂದರ್ಭ ಅನೇಕ ಮಂದಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ಇದ್ದರು.
’ರಾಜ್ಯದ 32 ತಾಲ್ಲೂಕುಗಳಲ್ಲಿ ಶೌರ್ಯ ವಿಪತ್ತು ನಿರ್ವಹಣ ಘಟಕಗಳನ್ನು ಈಗಾಗಲೆ ಪ್ರಾರಂಭಿಸಲಾಗಿದೆ. 270 ಸಂಯೋಜಕರು ಹಾಗೂ 2,780 ಸ್ವಯಂ ಸೇವಕರಿಗೆ ತರಬೇತಿ ನೀಡಿದ್ದು ಸ್ಥಳೀಯವಾಗಿ ಯಾವುದೇ ವಿಕೋಪ, ಅಪಘಾತ ಸಂಭವಿಸಿದಾಗ ಅವರು ಸದಾ ಸೇವೆಗೆ ಸಿದ್ಧದರಾಗಿದ್ದಾರೆ’ ಎಂದು ಪ್ರಾದೇಶಿಕ ನಿರ್ದೇಶಕ ವಿವೇಕ್ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.