ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

'ತುಡರ್' ತುಳು ಸಿನಿಮಾ 14 ರಂದು ತೆರೆಗೆ

Published 12 ಜೂನ್ 2024, 6:53 IST
Last Updated 12 ಜೂನ್ 2024, 6:53 IST
ಅಕ್ಷರ ಗಾತ್ರ

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ ಮೊದಲ ತುಳು ಸಿನಿಮಾ ‘ತುಡರ್’  ಇದೇ 14 ರಂದು ಕರಾವಳಿ ಜಿಲ್ಲೆಯಾದ್ಯಂತ ಪ್ರದರ್ಶನಗೊಳ್ಳಲಿದೆ.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆ ಸಾಹಿತ್ಯ ರಚನೆಕಾರ ಮೋಹನ್ ರಾಜ್, ‘ನಗರದ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನ ಸಿನಿಗ್ಯಾಲಕ್ಸಿ, ಪಡುಬಿದ್ರೆಯ ಭಾರತ್ ಸಿನಿಮಾಸ್, ಉಡುಪಿಯ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದ ಪ್ಲಾನೆಟ್, ರಾಧಿಕಾ, ಪುತ್ತೂರಿನ ಭಾರತ್ ಸಿನಿಮಾಸ್ ಬೆಳ್ತಂಗಡಿಯ ಭಾರತ್ ಚಿತ್ರಮಂದಿರದಲ್ಲಿ 'ತುಡರ್‌' ತೆರೆ ಕಾಣಲಿದೆ’ ಎಂದರು.

‘ಸಿನಿಮಾಕ್ಕೆ ವಿಲ್ಸನ್ ರೆಬೆಲ್ಲೊ, ಹರೀಶ್ ಶೆಟ್ಟಿ, ವಿದ್ಯಾ ಸಂಪತ್ ಬಂಡವಾಳ ಹೂಡಿದ್ದಾರೆ. ತೇಜೇಶ್ ಪೂಜಾರಿ ಎಲ್ಟನ್ ಮಸ್ಕರೇನ್ಹಸ್ ನಿರ್ದೇಶನ ಮಾಡಿದ್ದಾರೆ. ಪ್ಯಾಟ್ಟ್ಸನ್ ಪಿರೇರಾ, ಸಾಯೀಶ್ ಭಾರದ್ವಾಜ್ ಸಂಗೀತ ನೀಡಿದ್ದಾರೆ. ಮಂಗಳೂರು ಮತ್ತು ಉಡುಪಿಯ ಆಸುಪಾಸಿನಲ್ಲಿ ಸುಮಾರು 35 ದಿನ ಚಿತ್ರೀಕರಣ ನಡೆದಿದೆ. ಚಂತೂ ಮೆಪ್ಪಯುರು ಛಾಯಾಗ್ರಹಣವಿದೆ. ತಾರಾಬಳಗದಲ್ಲಿ ಸಿದ್ಧಾರ್ಥ್ ಎಚ್.ಶೆಟ್ಟಿ, ದೀಕ್ಷಾ , ಅರವಿಂದ ಬೋಳಾರ್, ರೂಪಾ ವರ್ಕಾಡಿ, ಸದಾಶಿವ ಅಮೀನ್, ನಮಿತಾ ಕೂಳೂರು, ಎಲ್ಟನ್ ಮಸ್ಕರೇನ್ಹಸ್, ವಿಕಾಸ್ ಪುತ್ರನ್, ಪ್ರಜ್ವಲ್ ಶೆಟ್ಟಿ, ಹರ್ಷಿತಾ ಶೆಟ್ಟಿ, ರಾಧೇಶ್ ಶೆಣೈ ಅನ್ವಿತಾ ಸಾಗರ್, ಜಯಶೀಲ, ಉಮೇಶ್ ಮಿಜಾರ್, ಅಶೋಕ್ ಕುಮಾರ್, ಉದಯ ಪೂಜಾರಿ, ಮೋಹನ್ ರಾಜ್ ಇದ್ದಾರೆ. ವಿಜೇತ್ ಆರ್‌. ನಾಯಕ್  ನೃತ್ಯ ಸಂಯೋಜನೆ ಮಾಡಿದ್ದಾರೆ. ಸಂಕಲನದಲ್ಲಿ ಗಣೇಶ್ ನೀರ್ಚಾಲ್, ಪ್ರಚಾರ ಮತ್ತು ವಿನ್ಯಾಸದಲ್ಲಿ ದೇವಿ, ಕಾರ್ತಿಕ್ ರೈ ಅಡ್ಯನಡ್ಕ ಪ್ರೊಡಕ್ಷನ್ ಮ್ಯಾನೇಜರ್‌ ಆಗಿ ಸಹಕರಿಸಿದ್ದಾರೆ’ ಎಂದರು.

ನಾಯಕನಟ ಸಿದ್ಧಾರ್ಥ್ ಶೆಟ್ಟಿ, ‘ಒಂದೇ ಕುಟುಂಬದಂತೆ ನಾವೆಲ್ಲರೂ ಒಟ್ಟಿಗೆ ಸೇರಿ ಸಿನಿಮಾ ತಯಾರಿಸಿದ್ದೇವೆ. ಈಗಾಗಲೇ  ದೇಶ–ವಿದೇಶಗಳಲ್ಲಿ ‘ತುಡರ್’ ಪ್ರೀಮಿಯರ್‌ ಶೋಗೆ ಮೆಚ್ಚುಗೆ ವ್ಯಕ್ತವಾಗಿದೆ.  ಸಿನಿಮಾ ಕಥೆ, ಪ್ರತಿಯೊಬ್ಬರ ನಟನೆಯನ್ನು ಪ್ರೇಕ್ಷಕರು ಇಷ್ಟಪಡಲಿದ್ದಾರೆ’ ಎಂದರು.

ನಿರ್ದೇಶಕ ತೇಜೇಶ್ ಪೂಜಾರಿ, ‘ಬಾಲಿವುಡ್‌ನಲ್ಲಿ 25 ವರ್ಷಗಳಿಂದ ತೊಡಗಿದ್ದೇನೆ. ಈ ಸಿನಿಮಾವನ್ನು ಪ್ರೀತಿಯಿಟ್ಟು ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಹರಸಿ’ ಎಂದರು.

ನಿರ್ಮಾಪಕ ವಿಲ್ಸನ್ ರೆಬೆಲ್ಲೊ, ವಿದ್ಯಾ, ಸಂಪತ್, ಹರೀಶ್ ಶೆಟ್ಟಿ, ನಟ ವಿಕಾಸ್ ಪುತ್ರನ್, ಉದಯ್ ಪೂಜಾರಿ, ಹಂಚಿಕೆದಾರ ಸಚಿನ್ ಎಸ್. ಶೆಟ್ಟಿ  ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT