ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಿ ಚೆನ್ನಯ ಹಗ್ಗ ಜಗ್ಗಾಟ ಸ್ಪರ್ಧೆ ಫೆ.18ಕ್ಕೆ

Published 16 ಫೆಬ್ರುವರಿ 2024, 3:07 IST
Last Updated 16 ಫೆಬ್ರುವರಿ 2024, 3:07 IST
ಅಕ್ಷರ ಗಾತ್ರ

ಮಂಗಳೂರು: ಕೋಟಿ ಚೆನ್ನಯ ಸೇವಾ ಬ್ರಿಗೇಡ್ ಆಶ್ರಯದಲ್ಲಿ ‘ಕೋಟಿ ಚೆನ್ನಯ ಟ್ರೋಫಿ’ ಪುರುಷರು ಮತ್ತು ಮಹಿಳೆಯರ ರಾಜ್ಯ ಮಟ್ಟದ ಮತ್ತು ಕಾಸರಗೋಡು ಜಿಲ್ಲೆಯ ಸ್ಪರ್ಧಿಗಳಿಗೆ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಫೆ.18ರಂದು ಸಂಜೆ 4.30 ಗಂಟೆಗೆ ಉರ್ವ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಾರಥ್ಯ ವಹಿಸಿರುವ ಮಹಾನಗರ ಪಾಲಿಕೆ ಸದಸ್ಯ ಕಿರಣ್ ಕೋಡಿಕಲ್ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಲೆವಲ್ ಮಾದರಿಯಲ್ಲಿ ಈ ಸೀಸನ್–2 ಸ್ಪರ್ಧೆ ನಡೆಯಲಿದೆ. ಉಳಿಕೆಯ ಹಣದಲ್ಲಿ ಆಯ್ದ ಸೇವಾಶ್ರಮಕ್ಕೆ ಆರ್ಥಿಕ ನೆರವು, ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅನಾರೋಗ್ಯ ಪೀಡಿತ ಕೆಲವರಿಗೆ ವೈದ್ಯಕೀಯ ಸಲಕರಣೆ ವಿತರಣೆ ಮಾಡಲಾಗುವುದು’ ಎಂದರು.

ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆರ್‌ಎಸ್‌ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ.ಎಸ್. ಕಾರ್ಯಕ್ರಮ ಉದ್ಘಾಟಿಸುವರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಸಂಸದ ನಳಿನ್‌ಕುಮಾರ್ ಕಟೀಲ್ ಮತ್ತಿತರರು ಭಾಗವಹಿಸುವರು. ಇದೇ ವೇಳೆ ‘ನಮ್ಮ ಮನೆಯ ಪುಟ್ಟ ರಾಮ’ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು’ ಎಂದರು.

ಪ್ರಮುಖರಾದ ಉಮೇಶ್ ಮಲರಾಯಸಾನ, ಸದಾನಂದ್ ಅಂಚನ್, ದೇವಿಪ್ರಸಾದ್ ಶೆಟ್ಟಿ, ಆನಂದ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT