ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಕಾರು ಡಿಕ್ಕಿ: ಅಪಾಯದಿಂದ ಪಾರು

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಶನಿವಾರ ಮುಂಜಾವಿನಲ್ಲಿ ಕತ್ತಲ್ಸಾರ್ ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದೆ. ಈ ವೇಳೆ ಕತ್ತಲ್ ಸಾರ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.