ಮಂಗಳೂರು: ತುಳು ಸಿನಿಮಾ ನಟ ಹಾಗೂ ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಅವರು ಸ್ಕೂಟರ್‌ನಿಂದ ಬಿದ್ದು, ಅವರ ಬಲಗಾಲಿಗೆ ಸಣ್ಣ ಪ್ರಮಾಣದ ಗಾಯವಾಗಿದೆ.

ಈ ಕುರಿತು ವಿಡಿಯೊ ಸಂದೇಶ ಹಂಚಿಕೊಂಡಿರುವ ಅರವಿಂದ ಬೋಳಾರ್, ‘ನಾನು ದ್ವಿಚಕ್ರ ವಾಹನ ಚಲಾಯಿಸುವಾಗ ಬಿದ್ದಿದ್ದೇನೆ. ಕಾಲಿಗೆ ಸ್ವಲ್ಪ ಏಟಾಗಿದೆ. ನೀವೆಲ್ಲ ನನ್ನನ್ನು ಅಷ್ಟು ಪ್ರೀತಿ ಮಾಡುತ್ತಿದ್ದೀರಿ. ನಿಮ್ಮೆಲ್ಲರ ಆಶೀರ್ವಾದದಿಂದ ನನಗೇ ಏನೂ ಆಗಿಲ್ಲ’ ಎಂದು ತಿಳಿಸಿದ್ದಾರೆ.

‘ನಾನು ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಿದ್ದೆ. ಆದ್ದರಿಂದಲೇ ದೊಡ್ಡಮಟ್ಟದ ಅನಾಹುತವಾಗುವುದು ತಪ್ಪಿದೆ’ ಎಂದೂ ಅವರು ತಿಳಿಸಿದ್ದಾರೆ.

‘ಬೋಳಾರ್ ಅವರು ಕೊಡಿಯಾಲ್‌ಬೈಲ್‌ನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಅವರಿಗೆ ಮಂಗಳವಾರ ಸಣ್ಣಪ್ರಮಾಣದ ಶಸ್ತ್ರಚಿಕಿತ್ಸೆ ನಡೆಯಲಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.

ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿಯವರು ಅರವಿಂದ್ ಬೊಳಾರ್ ಅವರನ್ನು ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.