ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕೃತ ಭಾಷೆಯಾಗಿ ತುಳು: ಸಿಎಂಗೆ ಮನವಿ

Last Updated 28 ಆಗಸ್ಟ್ 2020, 7:05 IST
ಅಕ್ಷರ ಗಾತ್ರ

ಮಂಗಳೂರು: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಜಿಲ್ಲೆಯ ಶಾಸಕರ ನಿಯೋಗ ಮನವಿ ಸಲ್ಲಿಸಿತು.

ದೇಶದ ಬಹುತೇಕ ರಾಜ್ಯಗಳಲ್ಲಿ ಆಯಾ ರಾಜ್ಯದಲ್ಲಿನ ಉತ್ತಮ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಭಾಷೆಗಳನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಸಂವಿಧಾನದ ಅನುಚ್ಛೇದ 345- ಬಿ ಪ್ರಕಾರ ಘೋಷಿಸಿಕೊಂಡಿವೆ. 2011 ರ ಜನಗಣತಿ ಪ್ರಕಾರ ಸುಮಾರು 18.05 ಲಕ್ಷ ಜನರು ಅಧಿಕೃತವಾಗಿ ತುಳು ಭಾಷೆಯನ್ನು ಮಾತನಾಡುತ್ತಾರೆ ಎಂದು ತಿಳಿಸಿದರು.

ಕರ್ನಾಟಕ ತುಳು ಆಕಾಡೆಮಿ ಹಾಗೂ ತುಳು ಸಂಘ ಸಂಸ್ಥೆಗಳ ಪ್ರಕಾರ ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಸುಮಾರು 40 ಲಕ್ಷಕ್ಕೂ ಅಧಿಕ ತುಳು ಭಾಷಿಕರಿದ್ದು, ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸುಮಾರು ಒಂದೂವರೆ ಕೋಟಿಗಿಂತಲೂ ಅಧಿಕ ತುಳು ಭಾಷಿಕರಿರುವುದನ್ನು ಗುರುತಿಸಲಾಗಿರುತ್ತದೆ ಎಂದು ವಿವರಿಸಿದರು.

ಸಲ್ಲಿಸಿರುವ ಮಾಹಿತಿಗಳನ್ನು ಅವಲೋಕಿಸಿ, ಸಕಾಲದಲ್ಲಿ ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆ ಎಂದು ಘೋಷಿಸಲು ರಾಜ್ಯ ಸರ್ಕಾರವು ಅನುಸರಿಸಬೇಕಾದ ಕ್ರಮಗಳೊಂದಿಗೆ ಕೇಂದ್ರ ಸರ್ಕಾರದಿಂದ‌ ಅನುಮೋದನೆ ಪಡೆಯಬೇಕು. ಈ ಮೂಲಕ ತುಳುನಾಡಿನ ಸಮಸ್ತರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತಾದ ಸಾಂವಿಧಾನಿಕ ಕಾನೂನುಗಳ ಪ್ರಕಾರ ಪ್ರಸ್ತಾವನೆ ಮಂಡಿಸಿ, ಅನುಮೋದನೆ ಪಡೆಯಬೇಕು. ನಂತರ ಕೇಂದ್ರ ಸರ್ಕಾರಕ್ಕೆ ಕಳುಹಿಸಿ, ಅಲ್ಲಿಂದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್‌, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಶಾಂತಾರಾಮ‌ ಸಿದ್ದಿ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT