ಮಂಗಳೂರು: ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಸೇರಬೇಕು, ಅದರೊಂದಿಗೆ ತುಳು ರಾಜ್ಯ ಸ್ಥಾಪನೆಯೂ ಆಗಬೇಕು ಎಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ಆಶಿಸಿದರು.

ತುಳು ಕೂಟ ಕುಡ್ಲದ 50ನೇ ವರ್ಷಾಚರಣೆ ‘ಬಂಗಾರ್ ಪರ್ಬ’ ಆಚರಣೆ ಸಮಿತಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತಮಾಡಿದ ಅವರು ಗೋವಾ ಪ್ರತ್ಯೇಕ ರಾಜ್ಯವಾಗಬಹುದು ಎಂದಾದರೆ ತುಳುನಾಡು ಯಾಕಾಗಬಾರದು ಎಂದು ಪ್ರಶ್ನಿಸಿದರು.

ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಮಾತ್ರವಲ್ಲ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ತುಳು ಮಾತನಾಡುವವರು ಇದ್ದಾರೆ. ಶಾಲೆಯಲ್ಲಿ ತುಳು ಒಂದು ಭಾಷೆಯಾಗಿ ಕಲಿಸುವುದನ್ನು ಕಡ್ಡಾಯ ಮಾಡಬೇಕು ಎಂದು ಅವರು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಳಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಗಣೇಶ್ ಶೆಟ್ಟಿ, ಜಿಲ್ಲಾ ಮೂರ್ತೆದಾರರ ಮಹಾಮಂಡಲದ ನಿರ್ದೇಶಕ ವಿಜಯ ಕುಮಾರ್ ಸೊರಕೆ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಹರಿಕಥಾ ಪರಿಷತ್ ಅಧ್ಯಕ್ಷ ಮಹಾಬಲ ಶೆಟ್ಟಿ, ತುಳುಕೂಟದ ಉಪಾಧ್ಯಕ್ಷ ಬಿ.ಪದ್ಮನಾಭ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಪಾಲ್ಗೊಂಡಿದ್ದರು.

ತುಳು ಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜೆ.ವಿ ಶೆಟ್ಟಿ ಸ್ವಾಗತಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.