ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಬಾರಿ 918 ವಿದ್ಯಾರ್ಥಿಗಳು ಪರೀಕ್ಷೆಗೆ

ಎಸ್ಸೆಸ್ಸೆಲ್ಸಿಯಲ್ಲಿ ತುಳು ಕಲಿಕೆಗೆ ಹೆಚ್ಚಿದ ಒಲವು
Last Updated 3 ಜುಲೈ 2021, 3:23 IST
ಅಕ್ಷರ ಗಾತ್ರ

ಮಂಗಳೂರು: ವಿದ್ಯಾರ್ಥಿಗಳಲ್ಲಿ ತುಳು ಭಾಷೆ ಕಲಿಕೆಗೆ ಆಸಕ್ತಿ ಹೆಚ್ಚಾಗುತ್ತಿದೆ. ಅದರಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯಾಗಿ ತುಳು ಕಲಿಕೆಗೆ ಸರ್ಕಾರ ಅವಕಾಶ ನೀಡಿದ್ದು, ಫಲಿ ತಾಂಶವೂ ಉತ್ತಮವಾಗಿದೆ. ಹೀಗಾಗಿ ಹೆಚ್ಚಿನ ಮಕ್ಕಳು ತೃತೀಯ ಭಾಷೆಯಾಗಿ ತುಳು ಕಲಿಯಲು ಮುಂದಾಗಿದ್ದಾರೆ.

ರಾಜ್ಯ ಸರ್ಕಾರವು 2014-15ರಿಂದ ಎಸ್ಸೆಸ್ಸೆಲ್ಸಿಯಲ್ಲಿ ತುಳು ಪಠ್ಯ ವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿದೆ. ಮೊದಲ ವರ್ಷ ಕೇವಲ 18 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಯಲ್ಲಿ ತುಳುಭಾಷೆಯನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿ ದ್ದರು. ಆದರೆ, ಈ ಬಾರಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 918 ವಿದ್ಯಾರ್ಥಿ ಗಳು ತುಳುವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

ಕಳೆದ ವರ್ಷ ಒಟ್ಟು 956 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ತುಳುವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡು, ಪರೀಕ್ಷೆ ಬರೆದಿದ್ದರು. ಎರಡೂ ಜಿಲ್ಲೆಗಳ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನಲ್ಲಿ ಈ ಬಾರಿ ಅತೀ ಹೆಚ್ಚು ವಿದ್ಯಾರ್ಥಿಗಳಿದ್ದು, ಬೆಳ್ತಂಗಡಿ 2ನೇ ಸ್ಥಾನದಲ್ಲಿದೆ. ವೇಣೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಗರಿಷ್ಠ ಅಂದರೆ 70 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ತುಳು ಪರೀಕ್ಷೆ ಬರೆಯಲಿದ್ದಾರೆ.

2,270 ವಿದ್ಯಾರ್ಥಿಗಳಿಂತ ತುಳು ಕಲಿಕೆ:

ಈ ಬಾರಿ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ 43 ಶಾಲೆಯಲ್ಲಿ ಒಟ್ಟು 2,270 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ವ್ಯಾಸಂಗ ಮಾಡುತ್ತಿದ್ದಾರೆ.

6 ನೇ ತರಗತಿಯಲ್ಲಿ 94, 7 ನೇ ತರಗತಿಯಲ್ಲಿ 105, 8 ನೇ ತರಗತಿಯಲ್ಲಿ 406, 9 ನೇ ತರಗತಿಯಲ್ಲಿ 747 ಹಾಗೂ 10ನೇ ತರಗತಿಯಲ್ಲಿ 918 ವಿದ್ಯಾ ರ್ಥಿಗಳು ತುಳುವನ್ನು ತೃತೀಯ ಭಾಷೆ ಯಾಗಿ ಕಲಿಯುತ್ತಿದ್ದಾರೆ. ಪುತ್ತೂರು ತಾಲ್ಲೂ ಕಿನಲ್ಲಿ 1,114, ಸುಳ್ಯ ತಾಲ್ಲೂ ಕಿನಲ್ಲಿ 144, ಬೆಳ್ತಂಗಡಿಯಲ್ಲಿ 573, ಬಂಟ್ವಾಳದಲ್ಲಿ 108, ಮಂಗಳೂರು ತಾಲ್ಲೂಕಿನಲ್ಲಿ 136, ಉಡುಪಿ ತಾಲ್ಲೂಕಿನಲ್ಲಿ 195 ವಿದ್ಯಾರ್ಥಿಗಳಿದ್ದಾರೆ.

ಕಳೆದ ವರ್ಷ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಟ್ಟು 42 ಶಾಲೆಗಳಲ್ಲಿ ಒಟ್ಟು 2,600 ವಿದ್ಯಾರ್ಥಿಗಳು 6ನೇ ತರಗತಿಯಿಂದ ಎಸ್ಸೆಸ್ಸೆಲ್ಸಿವರೆಗೆ ತುಳುವನ್ನು ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT