ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಸಮಿತಿ ರಚನೆ

Last Updated 31 ಜನವರಿ 2023, 6:10 IST
ಅಕ್ಷರ ಗಾತ್ರ

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್‌, ‘ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ ಅಧ್ಯಯನ ನಡೆಸಿ ಸೂಕ್ತ ಶಿಫಾರಸಿನೊಂದಿಗೆ ವರದಿ ನೀಡಲು ಡಾ. ಮೋಹನ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಅಲ್ಲದೆ, ಒಂದು ವಾರದಲ್ಲಿ ವರದಿ ನೀಡಲು ಈ ಸಮಿತಿಗೆ ಸೂಚಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಬೇಕೆಂದು ತುಳು ಭಾಷಿಕರು ಅನೇಕ ವರ್ಷಗಳಿಂದ ಬೇಡಿಕೆ ಮುಂದಿಡುತ್ತಲೇ ಇದ್ದಾರೆ. ರಾಜ್ಯದ ಸಂಸದರು ಹಲವು ಬಾರಿ ಈ ವಿಚಾರವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT