ಶನಿವಾರ, ಅಕ್ಟೋಬರ್ 31, 2020
27 °C

ಮಂಗಳೂರು: ಮತ್ತಿಬ್ಬರು ಪೆಡ್ಲರ್‌ಗಳು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಿಸಿಬಿ ಪೊಲೀಸರು‌‌ ಇಬ್ಬರು ಪೆಡ್ಲರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ವಶದಲ್ಲಿರುವ ಪೆಡ್ಲರ್‌ಗಳು ಬೆಂಗಳೂರಿನ ಕೆಂಗೇರಿ ನಿವಾಸಿ ಶಾಮ್, ನೈಜೀರಿಯಾ ಪ್ರಜೆ ಎಂದು ತಿಳಿದು ಬಂದಿದೆ. ಇವರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ಅಕೀಲ್ ನೌಶೀಲ್‌ಗೆ ಮುಂಬೈ, ಗೋವಾದಿಂದ ಡ್ರಗ್ಸ್ ಪೂರೈಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಮಂಗಳೂರಿನಲ್ಲಿ ನಡೆಯುವ ಪಾರ್ಟಿಗಳಿಗೆ ಈ ಪೆಡ್ಲರ್‌ಗಳು ಎಂಡಿಎಂಎ, ಎಲ್‌ಎಸ್‌ಡಿ ಸೇರಿದಂತೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಿಸಿಬಿ ಪೊಲೀಸರು 8 ಜನರನ್ನು ಬಂಧಿಸಿದ್ದಾರೆ.

25 ಕೆ.ಜಿ. ಗಾಂಜಾ ವಶ: ಮಂಗಳೂರಿನಿಂದ ಕಾರಿನಲ್ಲಿ ಸಾಗಿಸುತ್ತಿದ್ದ 25 ಕೆ.ಜಿ. ಗಾಂಜಾವನ್ನು ಕಾಸರಗೋಡು ಜಿಲ್ಲೆಯ ನೀಲೇಶ್ವರ ಅಬಕಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಕಾಸರಗೋಡು ಅಣಂಗೂರಿನ ಅಬ್ದುಲ್ ಸಮದ್, ಉದುಮ ಪಳ್ಳಿಕೆರೆ ಕಲ್ಲಿಂಗಾಲ್‌ನ ರಫೀಕ್ ಬಂಧಿತರು. ಕಾರನ್ನು ತಪಾಸಣೆ ಮಾಡಿದಾಗ ಗಾಂಜಾ ಪತ್ತೆಯಾಗಿದ್ದು, ಇದನ್ನು ಮಂಗಳೂರಿನಿಂದ ತಂದಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು