ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರಹ ಪೋಸ್ಟ್ ಮಾಡಿದ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಸದಸ್ಯರ ಬಗ್ಗೆ ವಾಟ್ಸ್‌ಆ್ಯಪ್ ಗ್ರೂಪ್‌ವೊಂದರಲ್ಲಿ ಆಕ್ಷೇಪಾರ್ಹ ಬರಹ ಹಾಕಿದ ಆರೋಪದ ಮೇಲೆ ಸುರೇಶ್ ರಾಜ್ ಎಂಬುವರ ವಿರುದ್ಧ ಬೆಳ್ತಂಗಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯ ವಿರುದ್ಧ ಐಪಿಸಿ ಕಲಂ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ) ಮತ್ತು 509 (ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಫೇಸ್‌ಬುಕ್ ಪೋಸ್ಟ್: ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿಯ ಬಗ್ಗೆ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಟೀಕೆ ಮಾಡಿರುವ ಆರೋಪದ ಮೇಲೆ ರಾಘವೇಂದ್ರ ಭಟ್ ಎಂಬುವರ ವಿರುದ್ಧ ಐಪಿಸಿ ಕಲಂ 509ರ ಅಡಿಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.