ಗುರುವಾರ , ಜನವರಿ 21, 2021
21 °C

ಎರಡು ಹದ್ದು ಸಾವು; ಹಕ್ಕಿಜ್ವರದ ಸಾಧ್ಯತೆ, ಎಚ್ಚರಿಕೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ಬಳಿ ಸತ್ತು ಬಿದ್ದ ಎರಡು ಹದ್ದುಗಳು ಶುಕ್ರವಾರ ಪತ್ತೆಯಾಗಿವೆ.

ನಿಡಿಗಲ್ ಮಜಲು ನಿವಾಸಿಗಳಾದ ಗೋಪಾಲ ಮಡಿವಾಳ ಹಾಗೂ ಶೇಖರ ಮಡಿವಾಳ ಅವರ ಗದ್ದೆಯಲ್ಲಿ ಹದ್ದುಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ಈಗಾಗಲೇ ಹಕ್ಕಿ ಜ್ವರದ ಭೀತಿ ಉಲ್ಬಣಿಸಿರುವುದರಿಂದ ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಎರಡು ಹದ್ದುಗಳು ಸತ್ತು 3 ದಿನ ಆಗಿರುವ ಸಾಧ್ಯತೆಯಿಂದ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇದರಿಂದ ಪರೀಕ್ಷೆಗೆ ಮಾದರಿ ಸಂಗ್ರಹಿಸಲು ಅಸಾಧ್ಯವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಪರಿಸರದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ತೆಂಗಿನ ಮರಗಳಲ್ಲಿ ಹದ್ದುಗಳು ಗೂಡು ಕಟ್ಟಿರುವುದರಿಂದ ಸುತ್ತಮುತ್ತ ಹೆಚ್ಚಾಗಿ ವಾಸಿಸುತ್ತಿವೆ. ಘಟನೆಗೆ ಹಕ್ಕಿ ಜ್ವರವೇ ಕಾರಣವೋ ಅಥವಾ ಹಕ್ಕಿಗಳೆರಡರ ಘರ್ಷಣೆ ಕಾರಣವೋ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ. ಸಮೀಪದ 25 ಮನೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮನೆ ಮಂದಿಯಲ್ಲಿ ಜ್ವರ ಲಕ್ಷಣ ಇದೆಯೇ ಎಂಬುದನ್ನು ಪರೀಕ್ಷಿಸಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕಲಾಮಧು, ಪಶುವೈದ್ಯಾಧಿಕಾರಿ ಡಾ. ಯತೀಶ್, ಕಲ್ಮಂಜ ಗ್ರಾ.ಪಂ. ಪಿಡಿಒ ಇಮ್ತಿಯಾಝ್, ಆರೋಗ್ಯ ಇಲಾಖೆಯ ಗಿರೀಶ್ ಮತ್ತು ಸೋಮನಾಥ್,  ಅರಣ್ಯ ರಕ್ಷಕ ರಾಜೇಶ್, ಆಶಾಕಾರ್ಯಕರ್ತೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು