ಶುಕ್ರವಾರ, ಆಗಸ್ಟ್ 12, 2022
22 °C

ಕಪ್ಪು ಶಿಲೀಂಧ್ರ: ಮತ್ತೆ 2 ಪ್ರಕರಣ, 2 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಕಪ್ಪು ಶಿಲೀಂಧ್ರದ 2 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ ಬಳಲುತ್ತಿದ್ದ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ತಲಾ ಒಬ್ಬರು ಮೃತಪಟ್ಟಿದ್ದಾರೆ. ಶನಿವಾರ 9 ಮಂದಿ ಗುಣಮುಖರಾಗಿದ್ದಾರೆ.

ಪತ್ತೆಯಾದ ಎರಡು ಹೊಸ ಪ್ರಕರಣಗಳು ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದ್ದಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ 9 ಹಾಗೂ ಬೇರೆ ಜಿಲ್ಲೆಗಳ 36 ಸೇರಿದಂತೆ ಒಟ್ಟು 45 ಸಕ್ರಿಯ ಪ್ರಕರಣಗಳಿವೆ. ವೆನ್ಲಾಕ್‌ನಲ್ಲಿ 34 ಮತ್ತು ಖಾಸಗಿ ಆಸ್ಪತ್ರೆಯಲ್ಲಿ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದುವರೆಗೆ ದಕ್ಷಿಣ ಕನ್ನಡ ಇಬ್ಬರು ಹಾಗೂ ಹೊರ ಜಿಲ್ಲೆಯ 12 ಮಂದಿ ಸೇರಿದಂತೆ 14 ಜನರು ಮೃತಪಟ್ಟಿದ್ದಾರೆ. ಕಪ್ಪು ಶಿಲೀಂಧ್ರ ಸೋಂಕಿನಿಂದ 13 ಜನರು ಗುಣಮುಖರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ 11 ಮಂದಿ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದ.ಕ.ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ 12 ಮಂದಿಯ ಸಹಿತ ಬ್ಲ್ಯಾಕ್ ಫಂಗಸ್‌ಗೆ ದ.ಕ.ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು