ಶುಕ್ರವಾರ, ಮೇ 27, 2022
30 °C

ಸುರತ್ಕಲ್‌ನ ಮತೀಯ ಗೂಂಡಾ‌ಗಿರಿ: ಆರು ಜನರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಸುರತ್ಕಲ್‌ನಲ್ಲಿ ಮತೀಯ ಗೂಂಡಾಗಿರಿ ನಡೆಸಿದ ಆರು ಜನ ಆರೋಪಿಗಳನ್ನು ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಬಂಧಿತ‌ ಆರೋಪಿಗಳು.

ಭಿನ್ನ ಕೋಮಿನ ಯುವತಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಬೆನ್ನಟ್ಟಿದ ಅರೋಪಿಗಳು ಹಲ್ಲೆ ನಡೆಸಿ, ಅವಾಚ್ಯ ‌ಶಬ್ದಗಳಿಂದ ನಿಂದಿಸಿದ್ದಾರೆ.

ಯುವತಿ ಅಪಾರ್ಟ್‌ಮೆಂಟ್ ಖಾಲಿ ಮಾಡುತ್ತಿದ್ದುದರಿಂದ ಲಗೇಜ್ ಶಿಫ್ಟ್ ಮಾಡಿ ಯುವಕ, ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಯುವಕರ ತಂಡ ಯುವಕನಿಗೆ ಥಳಿಸಿದೆ. ಈ ಬಗ್ಗೆ ಯುವಕ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು