ಗುರುವಾರ , ಫೆಬ್ರವರಿ 25, 2021
19 °C

ದ್ವಿಚಕ್ರ ವಾಹನಗಳೆರಡರ ಮುಖಾಮುಖಿ: ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ  ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಶನಿವಾರ ನಸುಕಿನ ಜಾವ ಸಂಭವಿಸಿದೆ.

ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಮೃತಪಟ್ಟವರು. ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುವ ಸಂದರ್ಭ ನಸುಕಿನ 3 ರ ಜಾವಕ್ಕೆ ಅಪಘಾತ ಸಂಭವಿಸಿದೆ. ತಲೆಗೆ ಗಂಭೀರ ಗಾಯಗೊಂಡ ಸಂದೇಶ್  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಪೇಂಟರ್ ಆಗಿದ್ದ ಸಂದೇಶ್, ಕೊರೊನಾ ಲಾಕ್ ಡೌನ್ ನಂತರ ಕೊಲ್ಯ  ಸಮೀಪ ಮೀನು ವ್ಯಾಪಾರ  ನಡೆಸುತ್ತಿದ್ದರು. ಮಂಗಳೂರಿನ ನಾಗುರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು