ನೇತ್ರಾವತಿ ಸ್ನಾನಘಟ್ಟದಲ್ಲಿ ಇಬ್ಬರು ಮಹಿಳೆಯ ಶವ ಪತ್ತೆ

ಉಜಿರೆ: ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ ಕಿಂಡಿ ಅಣೆಕಟ್ಟಿನ ಬಳಿ ಶುಕ್ರವಾರ ಇಬ್ಬರು ಅಪರಿಚಿತ ಮಹಿಳೆಯರ ಶವ ಪತ್ತೆಯಾಗಿದೆ. ಮೃತಪಟ್ಟ ಮಹಿಳೆಯರು 45 ವರ್ಷ ಮತ್ತು 25 ವರ್ಷ ಪ್ರಾಯದವರು ಎಂದು ಅಂದಾಜಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಗೆ ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡೂ ದೇಹಗಳು ಕವುಚಿ ಬಿದ್ದ ಸ್ಥಿತಿಯಲ್ಲಿ ಕಂಡು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.