ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

Last Updated 21 ಆಗಸ್ಟ್ 2021, 8:44 IST
ಅಕ್ಷರ ಗಾತ್ರ

ಮಂಗಳೂರು: ನಗರದ ಮಹಾಕಾಳಿ ಪಡ್ಪು ಬಳಿ ಶನಿವಾರ ಬೆಳಿಗ್ಗೆ ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ. ಇವರಿಬ್ಬರೂ ಬೀಡಿ ಕೊಡಲೆಂದು ಬೀಡಿ ಬ್ರ್ಯಾಂಚ್‌ಗೆ ಹೋಗುವಾಗ ಈ ಘಟನೆ ನಡೆದಿದೆ.

ವಸಂತಿ (50), ಪ್ರೇಮಾ (48) ಮೃತಪಟ್ಟ ಮಹಿಳೆಯರು. ಎಂದಿನಂತೆ ರೈಲು ಹಳಿ ದಾಟಿ ಬೀಡಿ ಕೊಡಲು ಹೋಗುತ್ತಿದ್ದಾಗ, ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ.

ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT