ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಸ್ಥರ ಅಹವಾಲು ಪರಿಹರಿಸಲು ಸೂಚಿಸುವೆ: ಖಾದರ್

Published 11 ಫೆಬ್ರುವರಿ 2024, 13:01 IST
Last Updated 11 ಫೆಬ್ರುವರಿ 2024, 13:01 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ (ಕೊಲ್ಲಮೊಗ್ರ): ಗ್ರಾಮಸ್ಥರು ಸಲ್ಲಿಸಿದ ಅಹವಾಲುಗಳನ್ನು ತಾಲ್ಲೂಕು ಜಿಲ್ಲೆ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳು ಪರಿಹರಿಸುತ್ತಾರೆ. ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಪರಿಹರಿಸಬೇಕಾದ ಸಮಸ್ಯೆಗಳನ್ನು ಆದ್ಯತೆಯಲ್ಲಿ ಪರಿಹರಿಸುವಂತೆ ಸೂಚಿಸಲಾಗುವುದು ಎಂದು ವಿಧಾಸನ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸಮಾರೋಪ‌‌ದಲ್ಲಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಕೊಲ್ಲಮೊಗ್ರ ಹರಿಹರ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಇಲ್ಲಿನ ವಿದ್ಯಾರ್ಥಿಗಳಿಗೆ ವಿಧಾನಸಭೆಯ ಕಲಾಪ ವೀಕ್ಷಣೆಗೆ ಅವಕಾಶ ಮಾಡಲಾಗುವುದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಸಮಾರೋಪ ಭಾಷಣ ಮಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಪ್ರಮುಖರಾದ ನಿತ್ಯಾನಂದ ಮುಂಡೋಡಿ, ಪಿ.ಸಿ.ಜಯರಾಮ, ಜಯಶ್ರೀ ಚಾಂತಾಳ, ಅಶ್ವತ್ ಯಾಲದಾಳ, ವಿಜಯ ಅಙಣ, ಜಯಂತ ಬಾಳುಗೋಡು, ರೋನ್ಸ್ ಬಂಟ್ವಾಳ, ಜಿತೇಂದ್ರ ಕುಂದೇಶ್ವರ, ಭಾಸ್ಕರ ರೈ ಕಟ್ಟ, ಪುಷ್ಪರಾಜ್ ಬಿ.ಎನ್., ಸೋಮಶೇಖರ ಕಟ್ಟೆಮನೆ ಭಾಗವಹಿಸಿದ್ದರು.

ಪತ್ರಕರ್ತರಾದ ಬಾಲಕೃಷ್ಣ ಭೀಮಗುಳಿ ಸ್ವಾಗತಿಸಿ, ಲೋಕೇಶ್ ಬಿ.ಎನ್.ವಂದಿಸಿದರು. ಗಂಗಾಧರ ಕಲ್ಲಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT