ಉಜಿರೆ: ಶನಿವಾರ ತಡರಾತ್ರಿ ಉಜಿರೆ-ಧರ್ಮಸ್ಥಳ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಸಹಸವಾರ, ವಿದ್ಯಾರ್ಥಿ ನಿತೇಶ್ (19) ಮೃತಪಟ್ಟಿದ್ದಾರೆ.

ಅವರು ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಅವರ ಪುತ್ರ. ಬೈಕ್ ಸವಾರ ಪುತ್ತೂರು ನಿವಾಸಿ ಲಿಖಿತ್ಗೆ ಗಂಭಿರ ಗಾಯವಾಗಿದ್ದು, ಉಜಿರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಲೇಜಿನಲ್ಲಿ ಭಾನುವಾರ ನಿಗದಿಯಾಗಿದ್ದ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಮುಂದೂಡಲಾಗಿದೆ.

ಉಜಿರೆ: ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರು ಮಾರ್ಚ್ 30ರಂದು ಬೆಳಿಗ್ಗೆ 6 ಗಂಟೆಗೆ ಉಜಿರೆಯ ಸಿದ್ಧವನ ಗುರುಕುಲದಿಂದ ಹೊರಟು ಮಧ್ಯಾಹ್ನ ಬೆಳ್ತಂಗಡಿ ಜೈನ ಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರಕ್ಕೆ ವಿಹಾರ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-29-942031784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.