ಉಜಿರೆ: ‘ದೇವಸ್ಥಾನ, ಮಠ, ಮಂದಿರ ಮೊದಲಾದ ಆಧ್ಯಾತ್ಮಿಕ ಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಪ್ರಗತಿಯಾಗಿ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಉಜಿರೆಯಲ್ಲಿ ಬುಧವಾರ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ ಸಮಾ ರಂಭದಲ್ಲಿ ಅವರು ಮಾತನಾಡಿದರು.

‘ಭಾರತ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿ ವಿಶ್ವಮಾನ್ಯತೆ ಗಳಿಸಿದೆ. ಆಧು ನಿಕತೆಯ ಪ್ರಗತಿಯೊಂದಿಗೆ ಧಾರ್ಮಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿಯೂ ಉತ್ತಮ ಪ್ರಗತಿ ಕಾಣುತ್ತಿರುವುದು ಉತ್ತಮ ಬೆಳವಣಿಗೆ’ ಎಂದರು.

ವಿಜಯಗೋಪುರ ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ‘ಉಜಿರೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದ್ದು, ಧರ್ಮಸ್ಥಳದ ಕರ್ಮಕ್ಷೇತ್ರ ಉಜಿರೆಯೇ ಆಗಿದೆ. ಶಾಲಾ, ಕಾಲೇಜುಗಳು ಹಾಗೂ ಎಂಜಿನಿಯರಿಂಗ್ ಕಾಲೇಜು ಸೇರಿ ಎಲ್ಕೆಜಿಯಿಂದ ಪಿ.ಜಿ.ವರೆಗೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿದ್ದು, ಉಜಿರೆಯ ಸರ್ವತೋಮುಖ ಪ್ರಗತಿಯಾಗಿದೆ. ಉಜಿರೆಯ ಧಣಿಗಳೆಂದೇ ಪರಿಚಿತರಾಗಿದ್ದ ಕೀರ್ತಿಶೇಷ ವಿಜಯರಾಘವ ಪಡ್ವೆಟ್ನಾಯರ ಸ್ಮರಣಾರ್ಥ ನಿರ್ಮಿಸಿದ ವಿಜಯಗೋಪುರ ಆಕರ್ಷಕವಾಗಿ ಮೂಡಿ ಬಂದಿದೆ’ ಎಂದರು.

ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಶಶಿಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಡಿ.ಹರ್ಷೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ಉಜಿರೆ ಅಶೋಕ ಭಟ್ ಸಂಪಾದನೆಯ ‘ವಿಜಯಪಥ’ ಮತ್ತು ಜನಾರ್ದನ ದೇವಸ್ಥಾನದ ಬಗ್ಗೆ ಸಾಂತೂರು ಶ್ರೀನಿವಾಸ ತಂತ್ರಿ ರಚಿಸಿದ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು. ರಾಜೇಶ್ ಪೈ ಧನ್ಯವಾದವಿತ್ತರು. ಪ್ರೊ.ಶ್ರೀಧರ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260305-29-1683811897

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.