ಉಜಿರೆ: ಇಲ್ಲಿನ ಕಾಶಿಬೆಟ್ಟು ಬಳಿಯ ಅರಳಿ ರಸ್ತೆಯಲ್ಲಿರುವ ರೋಟರಿ ಸೇವಾ ಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಪ್ರೊ.ಪ್ರಕಾಶ್ ಪ್ರಭು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸಾಹಿತ್ಯ ಸಮ್ಮೇಳನ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಶ್ರೀನಾಥ್ ಅತಿಥಿಯಾಗಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.

ಉಜಿರೆ: ಇಲ್ಲಿನ ಎಸ್ಡಿಎಂ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಹರೀಶ್ ಶೆಟ್ಟಿ ಅವರು ಮಹಾರಾಷ್ಟ್ರದ ನಾಗಪುರದಲ್ಲಿ ನಾಲ್ಕು ತಿಂಗಳು ಎನ್ಸಿಸಿ ನೌಕಾ ವಿಭಾಗದಲ್ಲಿ ತರಬೇತಿಯನ್ನು ಪೂರೈಸಿ ಸಬ್ ಲೆಫ್ಟಿನೆಂಟ್ ಸ್ಥಾನ ಪಡೆದಿದ್ದಾರೆ. ಅವರನ್ನು ಕಾಲೇಜಿನ ಎನ್ಸಿಸಿ ನೌಕಾ ವಿಭಾಗದ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ ತಿಳಿಸಿದ್ದಾರೆ.

ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ರಾಜ್ಯಮಟ್ಟದ ಅಂತರ ವಲಯಗಳ ಪುರುಷರ ಕಬಡ್ಡಿ ಟೂರ್ನಿ ಮೇ 18, 19ರಂದು ಉಜಿರೆ ಎಸ್ಡಿಎಂ ಎಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಇಂದ್ರಪ್ರಸ್ಥ ಒಳಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲ ಅಶೋಕಕುಮಾರ ಟಿ. ತಿಳಿಸಿದ್ದಾರೆ.

ಬೆಳಿಗ್ಗೆ 9.30ಕ್ಕೆ ನಡೆಯುವ ಟೂರ್ನಿಯನ್ನು ಕಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಉದ್ಘಾಟಿಸುವರು. ಬೆಳ್ತಂಗಡಿ ಉಪವಲಯ ಅರಣ್ಯಾಧಿಕಾರಿ ರಂಜಿತ್ ಕುಮಾರ್ ಎಸ್.. ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪ್ರಾಂಶುಪಾಲ ಟಿ.ಅಶೋಕಕುಮಾರ್ ಅಧ್ಯಕ್ಷತೆ ವಹಿಸುವರು. ವಿಭಾಗ ಮಟ್ಟದ ಟೂರ್ನಿಯಲ್ಲಿ ವಿಜೇತರಾದ 16 ತಂಡಗಳು ರಾಜ್ಯಮಟ್ಟದ ಟೂರ್ನಿಯಲ್ಲಿ ಭಾಗವಹಿಸಲಿವೆ.

ಶುಕ್ರವಾರ ನಡೆದ ಮಂಗಳೂರು ವಿಭಾಗ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ತಂಡ ಮತ್ತು ಮಂಗಳೂರಿನ ಎ.ಜೆ.ಶೆಟ್ಟಿ ಎಂಜಿನಿಯರಿಂಗ್ ಕಾಲೇಜು ತಂಡ ರಾಜ್ಯಮಟ್ಟದ ಟೂರ್ನಿಗೆ ಆಯ್ಕೆಯಾಗಿವೆ ಎಂದು ಸಂಘಟಕರು ತಿಳಿಸಿದ್ದಾರೆ.

ಉಜಿರೆ: ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್ -ಸೋಮಂತಡ್ಕ ರಸ್ತೆ ಬದಿಯಲ್ಲಿ ಶನಿವಾರ ಮುಂಜಾನೆ ತಾತ್ಕಾಲಿಕವಾಗಿ ಆರಂಭಿಸಿದ್ದ ಅಂಗಡಿಯೊಂದನ್ನು ಪಿಡಿಒ ಗಾಯತ್ರಿ ತೆರವುಗೊಳಿಸಿದರು.

ಅಂಗಡಿ ಆರಂಭಿಸುವ ದೃಶ್ಯಗಳನ್ನು ಸಿಸಿಟಿವಿ ಕ್ಯಾಮೆರಾದಲ್ಲಿ ಗಮನಿಸಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಅಂಗಡಿಯನ್ನು ತೆರವುಗೊಳಿಸಿದರು.

ಅನಧಿಕೃತ ಅಂಗಡಿಗಳು ರಸ್ತೆ ಬದಿಯಲ್ಲಿ ಕಂಡು ಬಂದರೆ ಮಾಹಿತಿ ನೀಡಬೇಕೆಂದು ಗಾಯತ್ರಿ ತಿಳಿಸಿದ್ದಾರೆ.

ನಿಡಿಗಲ್-ಸೋಮಂತಡ್ಕ ಪ್ರದೇಶದ ನಾಲ್ಕು ಕಿ.ಮೀ. ರಸ್ತೆ ವ್ಯಾಪ್ತಿಯಲ್ಲಿ ಐದು ಸಿಸಿಟಿವಿ ಕ್ಯಾಮೆರಾ ಕಾರ್ಯನಿರ್ವಹಿಸುತ್ತಿದ್ದು, ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ಹಾಗೂ ರಸ್ತೆ ಬದಿ ಕಸ ಹಾಕುವವರನ್ನು ಗಮನಿಸಲು ಅನುಕೂಲವಾಗಿದೆ. ಈ ರಸ್ತೆಯ ಮೂರು ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಪಿಡಿಒ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-1796427138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.