ಉಜಿರೆ: ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಏ.6 ಮತ್ತು 7ರಂದು ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಉದ್ಯೋಗ ಮೇಳ ‘ಎಸ್ಡಿಎಂ ಉದ್ಯೋಗಂ – 2026’ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ ತಿಳಿಸಿದರು.

ಗುರುವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉದ್ಯೋಗ ಮೇಳದ ನೋಂದಣಿ ಹಾಗೂ ಆಯ್ಕೆ ಪ್ರಕ್ರಿಯೆ ಪೇಪರ್ರಹಿತವಾಗಿದ್ದು, ಇದಕ್ಕಾಗಿ ವಿಶೇಷ ಸಾಫ್ಟ್ವೇರ್ ರೂಪಿಸಲಾಗಿದೆ. ಅಭ್ಯರ್ಥಿಗಳಿಗೆ ಸಂದರ್ಶನದ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳುವ ಸೌಲಭ್ಯ ಕಲ್ಪಿಸಲಾಗಿದೆ. ಎರಡು ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಾಯಿಸಿದ್ದಾರೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ನರ್ಸಿಂಗ್, ಐಟಿಐ, ಡಿಪ್ಲೊಮಾ ಪಡೆದವರು ಹಾಗೂ ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳೂ ಉಚಿತವಾಗಿ ಭಾಗವಹಿಸಬಹುದು. ನೂರಕ್ಕೂ ಮಿಕ್ಕಿ ಕಂಪನಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಲಿದ್ದು, ನಾಲ್ಕು ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲಿವೆ ಎಂದು ತಿಳಿಸಿದರು.

ಏ.6ರಂದು ಬೆಳಿಗ್ಗೆ 9.30ದಿಂದ ಉದ್ಯೋಗ ಮೇಳ ನಡೆಯಲಿದೆ ಎಂದರು.

ಎಸ್ಡಿಎಂ ಪಾಲಿಟೆಕ್ನಿಕ್ ಪ್ರಾಂಶುಪಾಲ ಸಂತೋಷ್, ಎಂಜಿನಿಯರಿಂಗ್ ಕಾಲೇಜಿನ ಪ್ರೊ.ದಿನೇಶ್, ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ, ಅಮರೇಶ್ ಹೆಬ್ಬಾರ್, ಪ್ರೊ.ನಾಗರಾಜ ಪೂಜಾರಿ, ಪ್ರೊ.ಸುನಿಲ್ ಹೆಗ್ಡೆ ಭಾಗವಹಿಸಿದ್ದರು.

ಉಜಿರೆ: ಕೊಕ್ಕಡ ಗ್ರಾಮದ ಬಾರ್ ಒಂದರಲ್ಲಿ ಮದ್ಯ ಸೇವಿಸುವ ಸಮಯ ಹಣಕಾಸಿನ ವಿಚಾರದಲ್ಲಿ ನಾಲ್ಕು ಜನ ಆರೋಪಿಗಳು ಹಲ್ಲೆ ಮಾಡಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ಗ್ರಾಮದ ಹೊಸಮನೆ ನಿವಾಸಿ ಅಕ್ಷಯ್ ಮಾರ್ಚ್ 29ರಂದು ರಾತ್ರಿ ಬಾರ್ನಲ್ಲಿ ಇದ್ದಾಗ ಯತೀಶ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ಕೊಡುವಂತೆ ಹೊರಗೆ ಎಳೆದುಕೊಂಡು ಗೋಗಿದ್ದ. ಬಾರ್ನ ಹಿಂಬದಿಯಲ್ಲಿ ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ಸೇರಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿ ನೀಡಿದ್ದಾರೆ.

ಹಲ್ಲೆಗೊಳಗಾದ ಅಕ್ಷಯ್ ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಆರೋಪಿಗಳಾದ ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-29-1162730884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.