ಉಳ್ಳಾಲ: ಗಾಂಧಿ ಗ್ರಾಮ ಪುರಸ್ಕೃತ ಬಾಳೆಪುಣಿ ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕದಿಂದ ಸಮಸ್ಯೆ ಆಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕೊರಗರ ಕಾಲೊನಿ ಸಮೀಪ, ರಸ್ತೆ ಪಕ್ಕದಲ್ಲೇ ನಿರ್ಮಿಸಿರುವ ಘನತ್ಯಾಜ್ಯ ಘಟಕದಿಂದ ಸ್ಥಳೀಯರು ಹಲವು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆ ಪಕ್ಕದಲ್ಲೇ ಇರುವ ಈ ಘಟಕದಲ್ಲಿ ಡೈಪರ್, ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ಸುರಿಯಲಾಗುತ್ತಿದ್ದು, ಸುಮಾರು ಹತ್ತು ವರ್ಷಗಳಿಂದ ಸಮಸ್ಯೆ ಇದೆ. ದುರ್ವಾಸನೆಯಿಂದಾಗಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿಗೆ ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಹಿಂದಿನ ಆಡಳಿತ ಅವಧಿಯಲ್ಲಿ ನಿರ್ಮಿಸಿದ ಘಟಕವಾಗಿರುವುದರಿಂದ ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದು ಪಂಚಾಯಿತಿ ಉತ್ತರ ನೀಡುತ್ತಿದೆ. ಆದರೆ, ಸ್ಥಳಾಂತರ ಸಾಧ್ಯವಿಲ್ಲದಿದ್ದರೂ ಸ್ವಚ್ಛತೆ ಮತ್ತು ಅಚ್ಚುಕಟ್ಟಾದ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಘಟಕದ ಬಳಿ ನಿಂತ ನೀರು ಸಮೀಪದ ಬಾವಿಗಳಿಗೆ ಸೇರಿ ನೀರು ಕಲುಷಿತಗೊಳ್ಳುವ ಆತಂಕ ಇದೆ. ಅಲ್ಲದೆ, ತ್ಯಾಜ್ಯ ಘಟಕದಲ್ಲಿ ಸುಮಾರು 60ಕ್ಕೂ ಹೆಚ್ಚು ನಾಯಿಗಳು ಆಶ್ರಯ ಪಡೆದಿರುವುದರಿಂದ ಸಂಚಾರಕ್ಕೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸುರೇಖಾ ಶರ್ಮ ಆರೋಪಿಸಿದರು. ದೂರು ನೀಡಿದ ದಿನ ಮಾತ್ರ ಮಣ್ಣು ಹಾಕಿ ಕಸ ಮುಚ್ಚಲಾಗುತ್ತದೆ, ಬಳಿಕ ಯಾರೂ ಗಮನಹರಿಸುವುದಿಲ್ಲ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಆರೋಗ್ಯದ ಹಿತದೃಷ್ಟಿಯಿಂದ ಘನತ್ಯಾಜ್ಯ ಘಟಕಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-29-1379856754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.