ಉಳ್ಳಾಲ: ಬಂದಿಕೋಟೆಯ ದೇವ ಸ್ಥಾನದ ಉದ್ಘಾಟನಾ ಸಮಾ ರಂಭದ ಸಿದ್ಧತೆ ನಡುವೆ ಸ್ಥಳೀಯ ನಿವಾಸಿ ಮೃತಪಟ್ಟಿದ್ದರಿಂದ ಭಾನುವಾರದ ಕಾರ್ಯಕ್ರಮವನ್ನೇ ಸ್ಥಗಿತಗೊಳಿಸಲಾಯಿತು.

ಉದ್ಘಾಟನಾ ಸಮಾರಂಭಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸಂಜೆ 4 ಗಂಟೆಗೆ ಕಾರ್ಯಕ್ರಮಗಳೂ ಆರಂಭವಾಗ ಬೇಕಿತ್ತು. ಅದೇ ಸಮಯ ದಲ್ಲಿ ಸ್ಥಳೀಯ ನಿವಾಸಿ ಹೈಡ್ರೋಸ್ ಎಂಬುವವರು ತೀವ್ರ ಅನಾರೋಗ್ಯಕ್ಕೆ ಒಳಗಾದರು. ತಕ್ಷಣ ಕಾರ್ಯಪ್ರವೃತ್ತರಾದ ದೇವಸ್ಥಾನದ ಸಮಿತಿಯವರು ಮತ್ತು ಭಕ್ತರು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅವರು ಅಲ್ಲಿ ಮೃತಪಟ್ಟರು.

ಹೈಡ್ರೋಸ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನದ ಸಮಿತಿ ಮತ್ತು ಭಕ್ತರು ಒಮ್ಮತದ ನಿರ್ಧಾರ ತೆಗೆದುಕೊಂಡು, ಪಕ್ಕದ ಮನೆಯವರು ದುಃಖದಲ್ಲಿರುವಾಗ ಸಂಭ್ರಮ ಆಚರಿಸುವುದು ಸರಿಯಲ್ಲ ಎಂದು ದೇವಸ್ಥಾನದ ಉದ್ಘಾಟನೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಔತಣಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದರು. ರಾತ್ರಿ ಸುಮಾರು 9.30ರವೇಳೆಗೆ ಹೈಡ್ರೋಸ್ ಅವರ ಅಂತ್ಯಕ್ರಿಯೆ ನಡೆಯುವವರೆಗೆ ದೇವಸ್ಥಾನದ ಸಂಭ್ರಮದ ಚಟುವಟಿಕೆ ಸ್ಥಗಿತಗೊಳಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-29-2095765652

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.