ಬುಧವಾರ, ಜುಲೈ 28, 2021
21 °C

ತಂದೆಯಿಂದಲೇ ಮಗನ ಮೇಲೆ ಪೆಟ್ರೋಲ್‌ ಸುರಿದು, ಬೆಂಕಿ ಹಚ್ಚಿ ಹತ್ಯೆಗೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಳ್ಳಾಲ: ಪುತ್ರನ ಮೇಲೆ ತಂದೆಯೇ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಜೆಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಯಲ್ಲಿರುವ ಪುತ್ರ ಶರ್ಮಿತ್ (25) ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ತಂದೆ, ಆರೋಪಿ ವಿಶ್ವನಾಥ ಶೆಟ್ಟಿ ಯಾನೆ ತಿಪ್ಪಿ ಎಂಬಾತನನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಸಂಜೆ ಮನೆಯಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ನಡೆದಿತ್ತು. ಇದೇ ದ್ವೇಷದಿಂದ ಮನೆಯ ಕೋಣೆಯೊಳಗೆ ಮಲಗಿದ್ದ ಪುತ್ರನ ಮೇಲೆ ಪೆಟ್ರೋಲ್ ಸುರಿದ ವಿಶ್ವನಾಥ ಶೆಟ್ಟಿ, ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ. ತಂದೆ ಹಾಗೂ ಮಗ ಇಬ್ಬರೂ ಮನೆಯಲ್ಲಿ ಹೈನುಗಾರಿಕೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು