ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.23ರಿಂದ ಉಳ್ಳಾಲ ದರ್ಗಾ ಉರೂಸ್

Last Updated 14 ಆಗಸ್ಟ್ 2021, 5:32 IST
ಅಕ್ಷರ ಗಾತ್ರ

ಉಳ್ಳಾಲ: ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ದರ್ಗಾ ಉರೂಸ್ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಉಳ್ಳಾಲ ದರ್ಗಾ ಆವರಣದಲ್ಲಿ ಶುಕ್ರವಾರ ನಡೆಯಿತು. ಉಳ್ಳಾಲ ಖಾಝಿ ಆಗಿದ್ದ ತಾಜುಲ್ ಉಲಮಾ ರವರ ಸುಪುತ್ರ ಇಂಬಿಚ್ಚಿ ಕೋಯ ತಂಙಳ್ ಧ್ವಜಾರೋಹಣ ನೆರವೇರಿಸಿದರು.

ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್, ‘ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ ಹಾಗೂ ಸಯ್ಯದ್ ಮದನಿ ಆಡಳಿತ ಸಮಿತಿ ಉಳ್ಳಾಲ ದರ್ಗಾ ಉರೂಸ್ ಕಾರ್ಯಕ್ರಮವು ಡಿಸೆಂಬರ್ 23ರಿಂದ ಜನವರಿ 16ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಐದು ವರ್ಷಕ್ಕೊಮ್ಮೆ ನಡೆಯುವ ಉಳ್ಳಾಲ ದರ್ಗಾ ಉರೂಸ್ 2020ರಲ್ಲಿ ನಡೆಯಬೇಕಿತ್ತು. ಕೋವಿಡ್ ಕಾರಣದಿಂದ ನಡೆಸಲು ಆಗಲಿಲ್ಲ. ಈಗ ಮೂರನೇ ಅಲೆ ಬಂದಿರುವ ಕಾರಣ ಮುಂದೂಡಲಾಯಿತು. ಈ ಸಮಾರಂಭಕ್ಕೆ ರಾಜ್ಯ, ಹೊರ ರಾಜ್ಯದ ಭಕ್ತರು ಬರುತ್ತಾರೆ. ಉರೂಸ್ ಕಾರ್ಯಕ್ರಮದಲ್ಲಿ ಎಪಿ ಉಸ್ತಾದ್, ಜಿಫ್ರಿ ತಂಙಳ್ ಸಹಿತ ಹಲವು ಧಾರ್ಮಿಕ, ಸಾಮಾಜಿಕ, ರಾಜಕೀಯ ಮುಖಂಡರು, ಭಾಗವಹಿಸಲಿದ್ದಾರೆ ಎಂದರು.

ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಉಪಾಧ್ಯಕ್ಷ ಯು.ಕೆ.ಮೋನು ಇಸ್ಮಾಯಿಲ್, ಬಾವ ಮೊಹಮ್ಮದ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹ, ಜತೆ ಕಾರ್ಯದರ್ಶಿಗಳಾದ ನೌಷಾದ್ ಅಲಿ, ಆಝಾದ್ ಇಸ್ಮಾಯಿಲ್, ಕೋಶಾಧಿಕಾರಿ ಯು.ಕೆ.ಇಲ್ಯಾಸ್, ಲೆಕ್ಕ ಪರಿಶೋಧಕ ಯು.ಟಿ.ಇಲ್ಯಾಸ್, ಚಾರಿಟಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಯು.ಕೆ.ಇಬ್ರಾಹಿಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT