ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿಗೆ ಜನ್ಮದಿನದ ಶುಭಾಶಯ ತಿಳಿಸಲು ಮೊಬೈಲ್ ಕೊಡದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!

Last Updated 13 ಜೂನ್ 2022, 9:07 IST
ಅಕ್ಷರ ಗಾತ್ರ

ಉಳ್ಳಾಲ: ತಾಯಿಗೆ ಜನ್ಮದಿನದ ಶುಭಾಶಯ ಕೋರಲು ಮೊಬೈಲ್‌ ನೀಡಿಲ್ಲವೆಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಲಪಾಡಿಯ ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್‌ನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ರಮೇಶ್‌ ಮತ್ತು ಮಂಜುಳಾ ದಂಪತಿಯ ಪುತ್ರ ಪೂರ್ವಜ್‌ (14) ಮೃತ ಬಾಲಕ. ಈತ 9ನೇ ತರಗತಿಯಲ್ಲಿ ಓದುತ್ತಿದ್ದ. ಶನಿವಾರ ಆತನ ತಾಯಿಯ ಜನ್ಮದಿನವಿತ್ತು. ಶಾಲಾ ಆಡಳಿತ
ಮಂಡಳಿಯ ನಿಯಮದಂತೆ ಹಾಸ್ಟೆಲ್‌ ವಾರ್ಡನ್‌, ಬಾಲಕನಿಗೆ ಮೊಬೈಲ್‌ ನೀಡಿರಲಿಲ್ಲ. ರಾತ್ರಿ 12 ಗಂಟೆಯವರೆಗೂ ಮಂಕಾಗಿ ಕುಳಿತಿದ್ದ ಬಾಲಕ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಭಾನುವಾರ ಬೆಳಿಗ್ಗೆ ವಿದ್ಯಾರ್ಥಿಯೊಬ್ಬ ಪೂರ್ವಜ್‌ ಶವ ನೋಡಿ, ವಾರ್ಡನ್‌ ಗಮನಕ್ಕೆ ತಂದಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆ, ಶಾಲಾ ಪ್ರಾಂಶುಪಾಲರು ಹಾಗೂ ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಮಂಜುಳಾ ಸಹೋದರ ಅರುಣ್‌ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಶಾಲಾ ಆಡಳಿತ ಮಂಡಳಿಯ ಕಿರುಕುಳದಿಂದ ಪೂರ್ವಜ್‌ ಆತ್ಮಹತ್ಯೆ ಮಾಡಿದ್ದಾನೆ. ಶಾಲಾ ಸೇರ್ಪಡೆ ವೇಳೆ ವಿದ್ಯಾರ್ಥಿಯ ಚಲನವಲನವನ್ನು ಪೋಷಕರಿಗೆ ತಿಳಿಸುತ್ತೇನೆ ಅಂದಿದ್ದರೂ ಈವರೆಗೆ ಪೂರ್ವಜ್‌ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ. ಹೆತ್ತವರು ಕರೆ ಮಾಡಿದರೂ ಸಂಭಾಷಣೆಗೆ ಶಾಲಾಡಳಿತ ಮಂಡಳಿ ಅವಕಾಶ ನೀಡುತ್ತಿರಲಿಲ್ಲ’ ಎಂದು ಆರೋಪಿಸಿದ್ದಾರೆ.

ಡೆತ್‌ ನೋಟ್‌ನಲ್ಲಿ ಏನಿದೆ?: ‘ತಾಯಿಗೆ ಜನ್ಮದಿನದ ಶುಭಾಶಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್‌ ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ನೀವು ನನ್ನನ್ನು ದುಃಖಕ್ಕೆ ತಳ್ಳಿದಿರಿ. ಯಾರೂ ಅಳಬೇಡಿ’ ಎಂದು ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT