ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು | ಕುಡಿಯುವ ನೀರಿಗೆ ₹300 ಕೋಟಿ ಯೋಜನೆ: ಯು.ಟಿ. ಖಾದರ್

ಉಳ್ಳಾಲ: ಸ್ವಾತಂತ್ರ್ಯೋತ್ಸವದಲ್ಲಿ ಯು.ಟಿ. ಖಾದರ್ ಹೇಳಿಕೆ
Published : 16 ಆಗಸ್ಟ್ 2024, 4:36 IST
Last Updated : 16 ಆಗಸ್ಟ್ 2024, 4:36 IST
ಫಾಲೋ ಮಾಡಿ
Comments

ಉಳ್ಳಾಲ: ‘ನಗರಕ್ಕೆ ದಿನದ 24 ಗಂಟೆ ಕುಡಿಯುವ ನೀರು ಪೂರೈಕೆ ಯೋಜನೆ ಆರು ತಿಂಗಳಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಗ್ರಾಮೀಣ ಪ್ರದೇಶದ ಕುಡಿಯುವ ನೀರು ಪೂರೈಕೆಗೆ ₹ 300 ಕೋಟಿ  ಬಿಡುಗಡೆಯಾಗಿದ್ದು, ಎರಡು ವರ್ಷಗಳ ಒಳಗೆ  ಕಾರ್ಯಗತಗೊಳ್ಳಲಿದೆ’ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು.

ಉಳ್ಳಾಲ ತಾಲ್ಲೂಕು ಆಡಳಿತವು ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ವೀರ ರಾಣಿ ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅವರು ಉದ್ಘಾಟಿಸಿದರು. ಬಳಿಕ ತೊಕ್ಕೊಟ್ಟು ಮೇಲ್ಸೇತುವೆ ಬಳಿ 110 ಮೀ. ಎತ್ತರದ ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು.

‘ಕೊಟೆಕಾರ್‌, ಕೊಣಾಜೆ, ಮತ್ತು ಉಳ್ಳಾಲದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪಿಸಲಾಗುತ್ತಿದೆ.  ರಸ್ತೆ ಅಭಿವೃದ್ಧಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ’ ಎಂದರು.  


ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟುವರೆಗೆ ಪಥಸಂಚಲನದಲ್ಲಿ 16 ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿದರು.  


ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ತಹಶೀಲ್ದಾರ್ ಪುಟ್ಟರಾಜು, ಕಾರ್ಯನಿರ್ವಹಣಾಧಿಕಾರಿ ಗುರುದತ್ತ್, ಪೌರಾಯುಕ್ತರಾದ ವಾಣಿ ವಿ. ಆಳ್ವ, ಶಿಶು ಅಭಿವೃದ್ಧಿ ಅಧಿಕಾರಿ ಶೈಲಾ ಜೆ. ಕಾರಗಿ, ದಕ್ಷಿಣ ವಲಯ ಕ್ರ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಎಚ್. ಆರ್., ಸೊಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಡಿ, ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯಸ್, ಕಣಚೂರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು. ಕೆ. ಮೋನು, ಎಸಿಪಿ ಧನ್ಯಾ ನಾಯಕ್, ಉಳ್ಳಾಲ ಇನ್‌ಸ್ಪೆಕ್ಟರ್ ಬಾಲಕೃಷ್ಣ ಎಚ್. ಎನ್. ಭಾಗವಹಿಸಿದ್ದರು.


ಪಥ ಸಂಚಲನದಲ್ಲಿ ಉಚ್ಚಿಲ ಬೋವಿ ಇಂಗ್ಲಿಷ್ ಮಾಧ್ಯಮ ಶಾಲೆ  ಪ್ರಥಮ ಹಾಗೂ ಹಝ್ರತ್ ಇಂಗ್ಲಿಷ್ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆಯಿತು.


ದೈಹಿಕ ಶಿಕ್ಷಣ ಶಿಕ್ಷಕ ತ್ಯಾಗಂ ಹರೇಕಳ ಮತ್ತು ಮೋಹನ್ ಶಿರ್ಲಾಲು, ಹಳೆಕೋಟೆ ಸೈಯ್ಯದ್ ಮದನಿ ಶಾಲೆಯ ಮುಖ್ಯ ಶಿಕ್ಷಕ ಕೆ.ಎಂ.ಕೆ. ಮಂಜನಾಡಿ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT