ಉಳ್ಳಾಲ: ವಿಶ್ವ ಹಿಂದೂ ಪರಿಷತ್ ಉಳ್ಳಾಲ ಪ್ರಖಂಡ ವತಿಯಿಂದ ಹಿಂದೂ ಸಮಾಜದ ಏಕತೆ ಮತ್ತು ಲೋಕಕಲ್ಯಾಣಾರ್ಥವಾಗಿ 6ನೇ ವರ್ಷದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ ಏ.12ರಂದು ಕದ್ರಿ ಮಂಜುನಾಥೇಶ್ವರ ದೇವಸ್ಥಾನದಿಂದ ಕುತ್ತಾರು ದೆಕ್ಕಾಡು ಕೊರಗಜ್ಜನ ಕಟ್ಟೆಯವರೆಗೆ ನಡೆಯಲಿದೆ ಎಂದು ನಮ್ಮ ನಡೆ ಆಯೋಜನಾ ಸಮಿತಿ ಅಧ್ಯಕ್ಷ ಪ್ರವೀಣ್ ಕುತ್ತಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6.30ಕ್ಕೆ ವಿಶ್ವಹಿಂದೂ ಪರಿಷತ್ ಮುಖಂಡರು ಪಾದಯಾತ್ರೆಗೆ ಚಾಲನೆ ನೀಡುವರು. ಪಾದಯಾತ್ರೆಯು ಮಲ್ಲಿಕಟ್ಟೆ, ಪಂಪ್ವೆಲ್, ನೇತ್ರಾವತಿ ಸೇತುವೆ, ತೊಕ್ಕೊಟ್ಟು ಮೂಲಕ ಕುತ್ತಾರು ತಲುಪಲಿದೆ. ದಾರಿಯುದ್ದಕ್ಕೂ ಫಲಾಹಾರ ವ್ಯವಸ್ಥೆಯನ್ನು ರಿಕ್ಷಾ ಚಾಲಕರು ಹಾಗೂ ಭಕ್ತರು ಕಲ್ಪಿಸಿದ್ದಾರೆ. ಖಾಸಗಿ ಬಸ್ ಮಾಲೀಕರ ಸಂಘವು ಭಕ್ತರ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಸಿದೆ. ಬಳಿಕ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೃಷ್ಣ ಅಡಿಗೆ ಭಾಗವಹಿಸಲಿದ್ದಾರೆ ಎಂದರು.

ವಿಶ್ವಹಿಂದೂ ಪರಿಷತ್ ಉಳ್ಳಾಲನಗರ ಪ್ರಖಂಡದ ಅಧ್ಯಕ್ಷ ನಾರಾಯಣ ಕುಂಪಲ ಮಾತನಾಡಿದರು.

ವಿಶ್ವಹಿಂದೂ ಪರಿಷತ್ ಮಂಗಳೂರು ಜಿಲ್ಲಾ ಸಹಕಾರ್ಯದರ್ಶಿ ಗುರುಪ್ರಸಾದ್ ಉಳ್ಳಾಲ್, ಆಶಿಕ್ ಮಾಡೂರು, ಪ್ರಭಾಕರ್ ಮಾಡೂರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-29-1748183561

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.